ನವದೆಹಲಿ: ಎರಡು ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತೆಯಾಗಿ ಕೆಲಸ ಮಾಡಿರುವ ಫ್ರಾನ್ಸ್ನ ವನೆಸ್ಸಾ ಡೊನಾಕ್ ಅವರು ಶುಕ್ರವಾರ ಸ್ವದೇಶಕ್ಕೆ ಮರಳಿದ್ದಾರೆ. ಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ತವರಿಗೆ ಮರಳುತ್ತಿರುವುದಾಗಿ ಹೇಳಿದ್ದಾರೆ.

‘ಭಾರತವನ್ನು ತೊರೆಯುವುದು ನನ್ನ ಆಯ್ಕೆಯಾಗಿರಲಿಲ್ಲ. ನಾನು ಬರೆದಿರುವ ಲೇಖನಗಳು ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟುಮಾಡುವಂತಿವೆ ಎಂದು ಕೇಂದ್ರ ಸರ್ಕಾರ ಆರೋಪಿಸಿದೆ. ಇದರಿಂದ ಬೇಸತ್ತು ದೇಶವನ್ನು ತೊರೆಯುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

‘ನಾನು 25 ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿ ಬಂದು 23 ವರ್ಷಗಳ ಕಾಲ ಪತ್ರಕರ್ತೆಯಾಗಿ ಕೆಲಸ ಮಾಡಿದ ದೇಶವನ್ನು ತೊರೆಯುತ್ತಿದ್ದೇನೆ. ನನ್ನ ವಿರುದ್ಧ ಆರೋಪಗಳು ಬಂದಿರುವ ಕಾರಣ ಇಲ್ಲಿ ಜೀವನ ಮುಂದುವರಿಸಲು ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ.

ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯು (ಎಫ್ಆರ್ಆರ್ಒ) ನಿಯಮ ಉಲ್ಲಂಘನೆ ಆರೋಪದಲ್ಲಿ ವನೆಸ್ಸಾ ಅವರಿಗೆ ಕಳೆದ ತಿಂಗಳು ನೋಟಿಸ್ ಜಾರಿಗೊಳಿಸಿತ್ತು. ನಿಮ್ಮ ಸಾಗರೋತ್ತರ ಭಾರತೀಯ ನಾಗರಿಕ (ಒಸಿಐ) ಕಾರ್ಡ್ ಅನ್ನು ಏಕೆ ರದ್ದುಪಡಿಸಬಾರದು ಎಂದು ಕೇಳಿತ್ತು.

ವನೆಸ್ಸಾ ಅವರು ಫ್ರಾನ್ಸ್, ಸ್ವಿಟ್ಜರ್ಲೆಂಡ್ ಮತ್ತು ಬೆಲ್ಜಿಯಂನ ಪತ್ರಿಕೆಗಳಿಗೆ ದಕ್ಷಿಣ ಏಷ್ಯಾದ ವರದಿಗಾರ್ತಿಯಾಗಿ ಅವರು ಕೆಲಸ ಮಾಡುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.