ಜೈಪುರ: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿರುವ ಫ್ರಾನ್ಸ್‌ನ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಅವರು ಇಂದು (ಗುರುವಾರ) ಜೈಪುರಕ್ಕೆ ಬಂದಿಳಿದಿದ್ದಾರೆ.

ಅವರನ್ನು ರಾಜಸ್ಥಾನದ ರಾಜ್ಯಪಾಲ ಕಾಲ್ರಾಜ್ ಮಿಶ್ರಾ ಹಾಗೂ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಬರಮಾಡಿಕೊಂಡರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬುಲಂದ್‌ಶಹರ್ ಪ್ರವಾಸದಲ್ಲಿದ್ದು, ಸಂಜೆ ಹೊತ್ತಿಗೆ ಜೈಪುರ ತಲುಪಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉಭಯ ನಾಯಕರು ಅಂಬೇರ್ ಕೋಟೆ, ಜಂತರ್ ಮಂತರ್, ಹವಾ ಮಹಲ್‌ಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿದೆ. ಜಂತರ್ ಮಂತರ್‌ನಿಂದ ಹವಾ ಮಹಲ್‌ವರೆಗೆ ರೋಡ್ ಶೋ ನಡೆಸಲಿದ್ದಾರೆ. ನಂತರ ರಾಮ್‌ಬಾಗ್ ಅರಮನೆ ಹೋಟೆಲ್‌ನಲ್ಲಿ ಸಭೆ ನಡೆಯಲಿದೆ ಎಂದು ಪಿಟಿಐ ವರದಿ ಮಾಡಿದೆ.

ಭಾರತ ಪ್ರವಾಸ ಕೈಗೊಂಡಿರುವ ಫ್ರಾನ್ಸ್ ನಾಯಕರು ಜೈಪುರದಲ್ಲಿರುವ ಕೆಲ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ, ಶಾಪಿಂಗ್ ನಡೆಸಲಿದ್ದಾರೆ. ಸಾಹು ಚಹಾ ಅಂಗಡಿಯಲ್ಲಿ ಮಸಾಲಾ ಚಹಾ ಸೇವಿಸಲಿದ್ದಾರೆ. ಇದಕ್ಕೆ ಯುಪಿಐ ಬಳಸಿ ಹಣ ಪಾವತಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
.ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್.ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್ ಭಾರತ ಭೇಟಿ ಇಂದು.
ಅಂಬೇರ್ ಕೋಟೆಯಲ್ಲಿ ಆನೆಗಳ ಸ್ವಾಗತ

ಫ್ರಾನ್ ಅಧ್ಯಕ್ಷ ಮ್ಯಾಕ್ರಾನ್ ಅವರಿಗೆ ಅಂಬೇರ್ ಕೋಟೆಯಲ್ಲಿ ಕೆಂಪು ಹಾಸಿನ ಸ್ವಾಗತ ನೀಡಲಾಯಿತು. ಮಾರ್ಗದ ಇಕ್ಕೆಲಗಳಲ್ಲಿ ನಿಲ್ಲಿಸಿದ ಆನೆಗಳು ಸೊಂಡಿಲು ಎತ್ತಿ ಸ್ವಾಗತಿಸಿದವು. ಕೋಟೆಯ ಆವರಣದ ಹೊರಭಾಗದಲ್ಲಿ ಕಲಾಕೃತಿಗಳ ಪ್ರದರ್ಶನಕ್ಕಾಗಿ ತಾತ್ಕಾಲಿಕ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಇದ್ದರು.

ಜೈಪುರದ ಹಲವು ಪ್ರದೇಶಗಳಲ್ಲಿ ಮೋದಿ ಮತ್ತು ಮ್ಯಾಕ್ರಾನ್ ಅವರ ಬೃಹತ್ ಕಟ್‌ಔಟ್‌ಗಳನ್ನು ನಿಲ್ಲಿಸಲಾಗಿದೆ. ನಗರದಲ್ಲಿ ಭಿಗಿ ಭದ್ರತೆ ಒದಗಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.