ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯ ಚಾರ್‌ಧಾಮ್ ಮಾರ್ಗದಲ್ಲಿ ಕುಸಿದ ಸುರಂಗದಲ್ಲಿ ಸಿಲುಕಿದ 40 ಕಾರ್ಮಿಕರ ರಕ್ಷಣೆಗಾಗಿ ವಾಯುಪಡೆ ಮೂಲಕ ದೆಹಲಿಯಿಂದ ಭಾರಿ ಪ್ರಮಾಣದ ನೆಲ ಕೊರೆಯುವ ಯಂತ್ರ (ಡ್ರಿಲ್ಲಿಂಗ್ ಮಿಷನ್)ವನ್ನು ಶುಕ್ರವಾರ ತರಲಾಗಿದೆ.

ಈ ಯಂತ್ರದ ಮೂಲಕ ಕುಸಿತವಾಗಿರುವ ಸುರಂಗದಲ್ಲಿ ಮಣ್ಣು ಕೊರೆಯುವ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ.

ಸಣ್ಣ ಯಂತ್ರದ ಮೂಲಕ ಅವಶೇಷಗಳಡಿ ಸ್ಟೀಲ್ ಪೈಪ್‌ಗಳನ್ನು ಬಿಟ್ಟು ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ವಿಫಲವಾದ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆಯು ಶುಕ್ರವಾರ ಸಿ–130 ಹರ್ಕ್ಯುಲಸ್ ಸಾಗಣೆ ವಿಮಾನಗಳ ಮೂಲಕ ಹೊಸ ಮಣ್ಣು ಕೊರೆಯುವ ಯಂತ್ರವನ್ನು ದೆಹಲಿಯಿಂದ ಉತ್ತರಕಾಶಿಗೆ ಸಾಗಿಸಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ‘ದೆಹಲಿಯಿಂದ ತರಿಸಿಕೊಳ್ಳಲಾದ ಹೊಸ ಯಂತ್ರದ ಮೂಲಕ ಈಗ ಕುಸಿತವಾಗಿರುವ ಸ್ಥಳದ ಮೂಲಕ 5–7 ಮೀಟರ್‌ವರೆಗೆ ಕೊರೆಯಲಾಗಿದೆ. ಪ್ರತಿ ಗಂಟೆಗೆ 5–10 ಮೀಟರ್‌ನಷ್ಟು ಕೊರೆಯುತ್ತಿರುವ ಈ ಯಂತ್ರವು ಶೀಘ್ರವೇ ಒಳಗೆ ಸಿಲುಕಿದ ಕಾರ್ಮಿಕರು ಇರುವ ಸ್ಥಳಕ್ಕೆ ತಲುಪಲಿದೆ ಎಂಬ ಭರವಸೆಯಿದೆ’ ಎಂದು ತಿಳಿಸಿದರು.

ಇದಕ್ಕೂ ಮುನ್ನ ಕೇಂದ್ರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ರಾಜ್ಯ ಖಾತೆ ಸಚಿವ ವಿ.ಕೆ. ಸಿಂಗ್ ಅವರು, ಘಟನಾ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ, ಕಾರ್ಯಾಚರಣೆಯನ್ನು ವೀಕ್ಷಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.