ಚಂಡೀಗಡ: ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್ಪಾಲ್ನ ಚಿಕ್ಕಪ್ಪ ಹರ್ಜಿತ್ ಸಿಂಗ್ ಹಾಗೂ ಆತನ ಕಾರು ಚಾಲಕನನ್ನು ಪಂಜಾಬ್ ಪೊಲೀಸರು ಭಾನುವಾರ ತಡರಾತ್ರಿ ಬಂಧಿಸಿದ್ದಾರೆ.

ಪಂಜಾಬ್ನ ಶಾಕೋಟ್ ಪ್ರದೇಶದಲ್ಲಿ ಅಮೃತ್ಪಾಲ್ನ ಚಿಕ್ಕಪ್ಪ ಹರ್ಜಿತ್ ಸಿಂಗ್ ಹಾಗೂ ಆತನ ಕಾರು ಚಾಲಕನನ್ನು ಬಂಧಿಸಲಾಗಿದೆ. ಬಂಧನಕ್ಕೂ ಮುನ್ನ ಅವರು ಶರಣಾಗಿದ್ದರು ಎಂದು ಡಿಜಿಪಿ ಸ್ವಪನ್ ಶರ್ಮಾ ತಿಳಿಸಿದ್ದಾರೆ.

ಅಮೃತ್ಪಾಲ್ ಸಿಂಗ್ ಇನ್ನೂ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಮುಂದುವರಿಸಿರುವ ಪೊಲೀಸರು ಭಾನುವಾರ ಮತ್ತೆ 34 ಬೆಂಬಲಿಗರನ್ನು ಬಂಧಿಸಿದ್ದಾರೆ. ಇಲ್ಲಿಯವರೆಗೂ ನೂರಕ್ಕೂ ಹೆಚ್ಚು ಜನರ ಬಂಧನವಾಗಿದೆ. ಇವರು ‘ವಾರಿಸ್ ಪಂಜಾಬ್ ದೇ’ (ಡಬ್ಲ್ಯುಪಿಡಿ) ಸಂಘಟನೆಗಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಸದ್ಯ ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅಮೃತ್ಪಾಲ್ ವಿರುದ್ಧ ಪೊಲೀಸರು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.

ಇನ್ನೊಂದೆಡೆ ಅಮೃತ್ಪಾಲ್ನನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ವದಂತಿ ಹರಡಿದ್ದು ಇದಕ್ಕೆ ಪುಷ್ಠಿ ನೀಡುವಂತೆ, ಅಮೃತ್ಪಾಲ್ನನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ ಎಂದು ಅವರ ಕಾನೂನು ಸಲಹೆಗಾರ ಇಮಾನ್ ಸಿಂಗ್ ಖಾರಾ ನ್ಯಾಯಾಲಯಕ್ಕೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ಗೆ ಇಮಾನ್ ಸಿಂಗ್ ಖಾರಾ ಭಾನುವಾರ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಅಮೃತ್ಪಾಲ್ನನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ ಎಂದು ಆರೋಪಿಸಿರುವ ಅವರು ಆತನನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಕೋರಿದ್ದಾರೆ. ಈ ಕುರಿತು ನ್ಯಾಯಾಲಯವು ಪಂಜಾಬ್ ಸ

ಅಮೃತ್ಪಾಲ್ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣ ದಾಖಲಾಗಿವೆ. ಆತನ ನೇತೃತ್ವದ ‘ವಾರಿಸ್ ಪಂಜಾಬ್ ದೇ’ (ಡಬ್ಲ್ಯುಪಿಡಿ) ಸಂಘಟನೆಗೆ ಸೇರಿದ ಶಕ್ತಿಗಳು ಕೋಮುಸೌಹಾರ್ದಕ್ಕೆ ಧಕ್ಕೆ ತರಲು ಯತ್ನಿಸಿದ್ದ ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮೃತ್ಪಾಲ್ನ ಹುಟ್ಟೂರು ಅಮೃತಸರದ ಜಲ್ಲೂಪುರ್ ಖೇರಾ ಗ್ರಾಮದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಅಲ್ಲಿ, ಅಮೃತ್ಪಾಲ್ ಸಿಂಗ್ನ ತಂದೆ ತರ್ಸೆಮ್ ಸಿಂಗ್ ಮತ್ತು ಆತನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಅಮೃತ್ಪಾಲ್ನನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ: ಇಮಾನ್ ಸಿಂಗ್ ಆರೋಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.