ಕೇಂದ್ರಪರಾ: ಕೋವಿಡ್-19 ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿದ್ದ ಆಶಾ ಕಾರ್ಯಕರ್ತೆಯೊಬ್ಬರು ಕೊರೊನಾ ವೈರಸ್ ಸೋಂಕಿನಿಂದಾಗಿ ಒಡಿಶಾದ ಕೇಂದ್ರಪರಾ ಜಿಲ್ಲೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಡೆರಾಬಿಶ್ ಸಮುದಾಯ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯಾಗಿದ್ದ ಸರಸ್ವತಿ ಮಲ್ಲಿಕ್ (35) ಅವರನ್ನು ಕಳೆದ ವಾರ ಛಾಟಾದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಮ್ಲಜನಕದ ಪ್ರಮಾಣ ಕಡಿಮೆಯಾಗಲು ಪ್ರಾರಂಭಿಸಿದ ನಂತರ ಆಕೆಯನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಬಳಿಕ ಅವರು ಶುಕ್ರವಾರ ರಾತ್ರಿ ನಿಧನರಾದರು ಎಂದು ಕೇಂದ್ರಪರಾ ಜಿಲ್ಲಾ ಕೇಂದ್ರ ಆಸ್ಪತ್ರೆಯ ಆಶಾದ ಸಹಾಯಕ ವ್ಯವಸ್ಥಾಪಕಿ ಯಶಸ್ವಿನಿ ಸಹಾನಿ ತಿಳಿಸಿದ್ದಾರೆ.

ಕೋವಿಡ್ ಕಂಟೈನ್‌ಮೆಂಟ್ ಕರ್ತವ್ಯಕ್ಕೆ ಸಂಬಂಧಿಸಿದಂತೆ ಆಶಾ ಕಾರ್ಯಕರ್ತೆಯು ಮನೆ-ಮನೆಯ ಸಮೀಕ್ಷೆಯಲ್ಲಿ ತೊಡಗಿಕೊಂಡಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾ ಆಶಾ ಕಾರ್ಮಿಕರ ಸಂಘ ಒತ್ತಾಯಿಸಿದೆ.

ಈ ಹಿಂದೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು, ಕೋವಿಡ್‌ನಿಂದಾಗಿ ಮೃತಪಟ್ಟ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಕೋವಿಡ್ ಯೋಧರ ಕುಟುಂಬ ಸದಸ್ಯರಿಗೆ ತಲಾ 50 ಲಕ್ಷ ರೂ. ಪರಿಹಾರ ಘೋಷಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.