ನವದೆಹಲಿ: ದೇಶದ ಪ್ರತಿಯೊಬ್ಬ ನಾಗರಿಕ ಮೂಲಭೂತ ಹಕ್ಕುಗಳನ್ನು ಪಡೆಯಲು ಅರ್ಹ ಎಂದು ಹೇಳಿರುವ ಸುಪ್ರೀಂಕೋರ್ಟ್,ಲೈಂಗಿಕ ಕಾರ್ಯಕರ್ತೆರಿಗೆ ಆಧಾರ್ ಕಾರ್ಡ್, ಪಡಿತರ ಮತ್ತು ಮತದಾರರ ಗುರುತಿನ ಚೀಟಿಯನ್ನು ನೀಡುವ ಪ್ರಕ್ರಿಯೆಯನ್ನು ಆದಷ್ಟು ಬೇಗ ನಡೆಸುವಂತೆ ಕೇಂದ್ರ, ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಕೋವಿಡ್–19 ಸಾಂಕ್ರಾಮಿಕದಿಂದ ಸಂಕಷ್ಟಕ್ಕೆ ಸಿಲುಕಿರುವ ಲೈಂಗಿಕ ಕಾರ್ಯಕರ್ತೆಯರ ಸಮಸ್ಯೆಗಳ ಕುರಿತಾದ ಅರ್ಜಿಯ ಬಗ್ಗೆ ವಿಚಾರಣೆ ನಡೆಸಿದ ಪೀಠವು, ಗುರುತಿನ ಪುರಾವೆ ಇಲ್ಲದಿದ್ದರೂ ಲೈಂಗಿಕ ಕಾರ್ಯಕರ್ತೆಯರಿಗೆ ಒಣ ಪಡಿತರವನ್ನು ನೀಡಬೇಕು ಎಂದು ಕೇಂದ್ರ ಮತ್ತು ಇತರೆ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ , ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ಪೀಠವು ಈ ಆದೇಶವನ್ನು ಹೊರಡಿಸಿದೆ.

‘ಲೈಂಗಿಕ ಕಾರ್ಯಕರ್ತರಿಗೆ ಪಡಿತರ ಚೀಟಿ ಮತ್ತು ಮತದಾರರ ಗುರುತಿನ ಚೀಟಿಯನ್ನು ನೀಡುವಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆದಶಕಗಳ ಹಿಂದೆ ನಿರ್ದೇಶನ ನೀಡಲಾಗಿತ್ತು. ಆದರೆ, ಈವರೆಗೂ ಆದೇಶ ಅನುಷ್ಠಾನಕ್ಕೆ ಬಂದಿಲ್ಲ. ಇದರ ಹಿಂದೆ ಯಾವುದೇ ಕಾರಣಗಳೂ ಇಲ್ಲ.ದೇಶದ ಎಲ್ಲಾ ನಾಗರಿಕರಿಗೆ ಮೂಲಭೂತ ಹಕ್ಕುಗಳನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ’ ಎಂದು ಪೀಠ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.