ನವದೆಹಲಿ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಸೆ.10ರಂದು (ಭಾನುವಾರ) ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಮತ್ತು ನಾಳೆ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ರಿಷಿ ಸುನಕ್ ಭಾಗವಹಿಸಿದ್ದು, ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ರಷ್ಯಾ–ಉಕ್ರೇನ್ ಬಿಕ್ಕಟ್ಟು, ಹವಾಮಾನ ಬದಲಾವಣೆಗೆ ಸೇರಿದಂತೆ ಸುಸ್ಥಿರ ಅಭಿವೃದ್ಧಿ ಗುರಿಗಳ (ಎಸ್ಡಿಜಿ) ಬಗ್ಗೆ ಉಭಯ ನಾಯಕರು ಚರ್ಚೆ ನಡೆಸುವ ಸಾಧ್ಯತೆ ಇದೆ. ಆದರೆ, ಈ ಕುರಿತು ನಿರ್ದಿಷ್ಟ ಮಾಹಿತಿ ನೀಡಲು ಜಿ20ಗೆ ಸಂಬಂಧಿಸಿದ ಉನ್ನತ ಅಧಿಕಾರಿಗಳು ನಿರಾಕರಿಸಿದ್ದಾರೆ.

ಓದಿ... G20 Summit: ಆಫ್ರಿಕಾ ಒಕ್ಕೂಟಕ್ಕೆ ಖಾಯಂ ಸದಸ್ಯತ್ವ; ಪ್ರಧಾನಿ ಮೋದಿ ಘೋಷಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.