ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಆಫ್ರಿಕಾ ಒಕ್ಕೂಟಕ್ಕೆ ಕಾಯಂ ಸದಸ್ಯತ್ವ ನೀಡುವ ಪ್ರಸ್ತಾಪವನ್ನು ಅಂಗೀಕರಿಸಲಾಯಿತು.

ಈ ಕುರಿತು 'ಭಾರತ ಮಂಟಪ'ದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದರು.

ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ ಮಹತ್ತರ ಹೆಜ್ಜೆ ಇರಿಸಲಾಗಿದ್ದು, ಐರೋಪ್ಯ ಒಕ್ಕೂಟಕ್ಕೆ ಸಮಾನವಾಗಿ ಆಫ್ರಿಕಾ ಒಕ್ಕೂಟ, ಕಾಯಂ ಸದಸ್ಯತ್ವ ಪಡೆದಿದೆ.

ಜಿ20 ಕುಟುಂಬದ ಸದಸ್ಯತ್ವಕ್ಕೆ ಆಫ್ರಿಕಾ ಒಕ್ಕೂಟವನ್ನು ಸ್ವಾಗತಿಸಿರುವ ಪ್ರಧಾನಿ ಮೋದಿ, ಈ ಮೂಲಕ ಜಿ20 ಹಾಗೂ ಜಾಗತಿಕ ಮಟ್ಟದಲ್ಲಿ ದಕ್ಷಿಣದ ಧ್ವನಿಯನ್ನು ಮತ್ತಷ್ಟು ಬಲಗೊಳಿಸಲಿದೆ ಎಂದು ಹೇಳಿದರು.

'ಸಬ್ ಕಾ ಸಾಥ್' ಕಲ್ಪನೆಗೆ ಅನುಗುಣವಾಗಿ ಆಫ್ರಿಕಾ ಒಕ್ಕೂಟಕ್ಕೆ ಕಾಯಂ ಸದಸ್ಯತ್ವ ನೀಡಬೇಕು ಎಂದು ಭಾರತ ಪ್ರಸ್ತಾಪಿಸಿತ್ತು. ಈ ಪ್ರಸ್ತಾಪಕ್ಕೆ ನಾವೆಲ್ಲರೂ ಅನುಮೋದನೆ ನೀಡಿದ್ದೇವೆ ಎಂದು ನಂಬುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.