ನವದೆಹಲಿ: ದ್ವಾರಕಾ ಎಕ್ಸ್‌ಪ್ರೆಸ್‌ವೇನ ಅಭಿವೃದ್ಧಿ ವೆಚ್ಚದಲ್ಲಿ ಹೆಚ್ಚಳವಾಗಿರುವ ಕುರಿತು ಮಹಾಲೇಖಪಾಲರು (ಸಿಎಜಿ) ಎತ್ತಿರುವ ಪ್ರಶ್ನೆಗಳಿಗೆ ತಮ್ಮ ಸಚಿವಾಲಯದ ಅಧಿಕಾರಿಗಳು ಸಮರ್ಪಕ ಉತ್ತರ ನೀಡದಿರುವ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

‘ಗುರುವಾರ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಗಡ್ಕರಿ, ಸಿಎಜಿ ವರದಿಯಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಉತ್ತರ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ತಮ್ಮ ಅಸಮಾಧಾನ ಹೊರ ಹಾಕಿದರು’ ಎಂದು ಮೂಲಗಳು ಹೇಳಿವೆ.

‘ಈ ವಿಷಯದಲ್ಲಿ ಕರ್ತವ್ಯಲೋಪ ಎಸಗಿರುವ ಹಿರಿಯ ಅಧಿಕಾರಿಗಳ ಮೇಲೆ ಹೊಣೆಗಾರಿಕೆ ನಿಗದಿಪಡಿಸುವಂತೆಯೂ ಸಚಿವ ಗಡ್ಕರಿ ಸೂಚಿಸಿದರು’ ಎಂದು ಇವೇ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.