ಜೈಪುರ: ‘ರಾಜಸ್ಥಾನ ರಾಜಕೀಯದಲ್ಲಿ ಅಶೋಕ್ ಗೆಹಲೋತ್ ಒಬ್ಬ ರಾವಣ. ಆದ್ದರಿಂದ ರಾಜ್ಯದಲ್ಲಿ ರಾಮರಾಜ್ಯ ಸ್ಥಾಪನೆ ಮಾಡಬೇಕು ಎಂಬ ನಿರ್ಧಾರವನ್ನು ನೀವು ಕೈಗೊಳ್ಳಬೇಕು’ ಎಂದು ಜನರನ್ನು ಉದ್ದೇಶಿಸಿ ಭಾಷಣ ಮಾಡಿದ್ದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ವಿರುದ್ಧ ಕಾಂಗ್ರೆಸ್ ದೂರು ನೀಡಿದ್ದು, ಶನಿವಾರ ಎಫ್‌ಐಆರ್ ದಾಖಲಾಗಿದೆ.

ರಾಜಸ್ಥಾನದ ಚಿತ್ತೋಡಗಢದಲ್ಲಿ ಗುರುವಾರ (ಏ.27) ‘ಜನ ಆಕ್ರೋಶ’ ರ್‍ಯಾಲಿಯನ್ನು ಬಿಜೆಪಿ ಆಯೋಜಿಸಿತ್ತು. ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿದ್ದ ಗಜೇಂದ್ರ ಅವರು ಮುಖ್ಯಮಂತ್ರಿ ಅಶೋಕ್ ಗೆಹಲೋತ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಸುರೇಂದ್ರ ಸಿಂಗ್ ಜಡಾವತ್ ಅವರು ಪೊಲೀಸರಿಗೆ ದೂರು ನೀಡಿದ್ದರು.

‘ರಾಜಸ್ಥಾನದ ಮುಖ್ಯಮಂತ್ರಿಯ ವಿರುದ್ಧ ಮಾನಹಾನಿಕರ ಮಾತುಗಳನ್ನಾಡಿದ ಗಜೇಂದ್ರ ಸಿಂಗ್ ವಿರುದ್ಧ ನಾನು ಪೊಲೀಸರಿಗೆ ದೂರು ನೀಡಿದ್ದೇನೆ. ರ್‍ಯಾಲಿಯಲ್ಲಿ ಗಜೇಂದ್ರ ಅವರು ಧಾರ್ಮಿಕ ಭಾವನೆಯನ್ನು ಕೆರಳಿಸಲು ಯತ್ನಿಸಿದ್ದರು’ ಎಂದು ಸುರೇಂದ್ರ ಸಿಂಗ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.