ನವದೆಹಲಿ: ಚೀನಾ ವಿರುದ್ಧದ ಹೋರಾಟದಲ್ಲಿ ಮಡಿದ ಕರ್ನಲ್ ಬಿಕುಮಲ್ಲ ಸಂತೋಷ್ ಬಾಬು ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಂಗಳವಾರ ಮಹಾವೀರ ಚಕ್ರ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರದಾನ ಮಾಡಿದರು.

ಬಿಕುಮಲ್ಲ ಅವರು ಕಳೆದ ವರ್ಷ ಜೂನ್ 15 ರಂದು ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ಚೀನಾದ ದಾಳಿಯ ವಿರುದ್ಧದ ಹೋರಾಟದ ನೇತೃತ್ವ ವಹಿಸಿದ್ದ 16 ಬಿಹಾರ್ ರೆಜಿಮೆಂಟ್‌ನ ಕಮಾಂಡಿಂಗ್ ಅಧಿಕಾರಿ ಆಗಿದ್ದರು.

ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ದೇಶದ ಉನ್ನತ ಸೇನಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಕುಮಲ್ಲ ಸಂತೋಷ್ ಬಾಬು ಅವರ ಪತ್ನಿ ಬಿ.ಸಂತೋಷಿ ಮತ್ತು ತಾಯಿ ಮಂಜುಳ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಪರಮವೀರ ಚಕ್ರದ ನಂತರ ಮಹಾವೀರ ಚಕ್ರವು ಎರಡನೇ ಅತ್ಯುನ್ನತ ಶೌರ್ಯ ಪ್ರಶಸ್ತಿಯಾಗಿದೆ.

ಗಾಲ್ವನ್ ಕಣಿವೆಯಲ್ಲಿ ಚೀನಾ ಪಡೆಗಳ ಜೊತೆಗಿನ ಯುದ್ಧದಲ್ಲಿ ಹುತಾತ್ಮರಾದ ನೈಯಿಬ್ ಸುಬೇದಾರ್ ನುದುರಾಮ್ ಸೊರೆನ್, ಹವೀಲ್ದಾರ್ (ಗನ್ನರ್) ಕೆ ಪಳನಿ, ನಾಯಕ್ ದೀಪಕ್ ಸಿಂಗ್ ಮತ್ತು ಸಿಪಾಯಿ ಗುರ್ತೇಜ್ ಸಿಂಗ್ ಅವರಿಗೆ ಮರಣೋತ್ತರವಾಗಿ ವೀರಚಕ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.