ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಕ್ಕಿಂ ಪ್ರವೇಶಿಸುವ ಪ್ರವಾಸಿ ವಾಹನಗಳಿಗೆ ಕಸದ ಚೀಲ ಕಡ್ಡಾಯ

Published 21 ಜುಲೈ 2024, 4:35 IST
Last Updated 21 ಜುಲೈ 2024, 4:35 IST
ಅಕ್ಷರ ಗಾತ್ರ

ಗ್ಯಾಂಗ್ಟಕ್‌: ಸಿಕ್ಕಿಂಗೆ ಪ್ರವೇಶಿಸುವ ಎಲ್ಲಾ ಪ್ರವಾಸಿ ವಾಹನಗಳು ಕಡ್ಡಾಯವಾಗಿ ಕಸದ ದೊಡ್ಡ ಚೀಲವನ್ನು ಹೊಂದಿರಬೇಕು ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

'ಪರಿಸರ ಸುಸ್ಥಿರತೆಯ ಗುರಿಯನ್ನು ಸಾಧಿಸಲು ಸಮುದಾಯದ ಸಹಭಾಗಿತ್ವಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ' ಎಂದು ಪ್ರವಾಸೋದ್ಯಮ ಮತ್ತು ನಾಗರಿಕ ವಿಮಾನಯಾನ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.

'ತ್ಯಾಜ್ಯ ವಿಲೇವಾರಿಗೆ ಕಸದ ಚೀಲಗಳನ್ನು ಬಳಸುವ ಬಗ್ಗೆ ಪ್ರಯಾಣಿಕರಿಗೆ ತಿಳಿಸುವುದು ಪ್ರವಾಸ ನಿರ್ವಾಹಕರು, ಟ್ರಾವೆಲ್ ಏಜೆನ್ಸಿಗಳು ಮತ್ತು ವಾಹನ ಚಾಲಕರ ಜವಾಬ್ದಾರಿಯಾಗಿದೆ' ಎಂದು ಅದು ಹೇಳಿದೆ.

ಪ್ರವಾಸಿ ವಾಹನಗಳನ್ನು ಯಾದೃಚ್ಛಿಕ ತಪಾಸಣೆ ನಡೆಸಲಾಗುವುದು. ಆದೇಶವನ್ನು ಉಲ್ಲಂಘಿಸುವುದು ಕಂಡುಬಂದಲ್ಲಿ ದಂಡ ವಿಧಿಸಲಾಗುವುದು ಎಂದು ಅದು ಹೇಳಿದೆ.

ತ್ಯಾಜ್ಯ ನಿರ್ವಹಣೆ ಮತ್ತು ಪರಿಸರ ಸುಸ್ಥಿರತೆಯ ಬಗ್ಗೆ ಪ್ರವಾಸಿಗರಿಗೆ ಅರಿವು ಮೂಡಿಸಲು ಸ್ವಚ್ಛತೆಯ ಬಗ್ಗೆ ಜಾಗೃತಿ ಅಭಿಯಾನಗಳನ್ನೂ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

6 ಲಕ್ಷಕ್ಕೂ ಹೆಚ್ಚು ನಿವಾಸಿಗಳನ್ನು ಹೊಂದಿರುವ ಸಿಕ್ಕಿಂ ಭಾರತದ ಅತ್ಯಂತ ಕಡಿಮೆ ಜನಸಂಖ್ಯೆ ಹೊಂದಿರುವ ರಾಜ್ಯ. ಇಲ್ಲಿರುವ ಸುಂದರವಾದ ಹಿಮಾಲಯ ತಾಣಗಳನ್ನು ನೋಡಲು ಪ್ರತಿ ವರ್ಷ 20 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT