ತಿರುವನಂತಪುರ: ಕೇರಳದಲ್ಲಿ ಭಾನುವಾರ ನಡೆದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ (ನೀಟ್) ವೇಳೆ ವಿದ್ಯಾರ್ಥಿನಿಗೆ ಒಳ ಉಡುಪು ತೆಗೆದು ನೀಟ್ ಪರೀಕ್ಷೆ ಬರೆಯುವಂತೆ ಸೂಚಿಸಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ.

ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಕೊಲ್ಲಂ ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಯ ನೀಟ್ ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಕೇರಳದ ವ್ಯಕ್ತಿಗೆ ‘ಮಂಕಿಪಾಕ್ಸ್’: ದೇಶದಲ್ಲಿ ಪತ್ತೆಯಾದ ಎರಡನೇ ಪ್ರಕರಣ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನೀಟ್ ಪರೀಕ್ಷೆ ನಡೆಸುತ್ತದೆ. ಅಲ್ಲದೆ ಕಟ್ಟುನಿಟ್ಟಿನ ನಿಯಮ ಪಾಲಿಸಲಾಗುತ್ತದೆ. ಪರೀಕ್ಷೆಗೂ ಮೊದಲು ಸ್ಕ್ರೀನಿಂಗ್ ಸಮಯದಲ್ಲಿ ಬಾಲಕಿಯ ಒಳ ಉಡುಪಿನಲ್ಲಿ ಮೆಟಲ್ ಡಿಟೆಕ್ಟ್ ಆಗಿದ್ದು, ಒಳ ಉಡುಪು ತೆಗೆದ ಬಳಿಕವಷ್ಟೇ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ ಎನ್ನಲಾಗಿದೆ.

ಇದರಿಂದ 17 ವರ್ಷದ ವಿದ್ಯಾರ್ಥಿನಿ ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ.

ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಕೇರಳದ ಶಿಕ್ಷಣ ಸಚಿವೆ ಆರ್. ಬಿಂದು ಪ್ರತಿಕ್ರಿಯಿಸಿದ್ದಾರೆ. ಕೇರಳ ಮಾನವ ಹಕ್ಕುಗಳ ಆಯೋಗವು ತನಿಖೆಗೆ ಆದೇಶಿಸಿದೆ.

ಘಟನೆ ಸಂಬಂಧ ಹಲವು ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿವೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ನೀಟ್ ಪರೀಕ್ಷೆ ಬರೆದ ಇತರೆ ವಿದ್ಯಾರ್ಥಿನಿಯರಿಗೂ ಇದಕ್ಕೆ ಸಮಾನವಾದ ತೊಂದರೆ ಎದುರಾಗಿದೆ ಎಂಬುದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.