ಇಸ್ಲಾಮಾಬಾದ್:ಗೂಢಚಾರಿಕೆ ಆರೋಪದಲ್ಲಿ ಬಂಧನಕ್ಕೊಳಗಾಗಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ನೌಕಾ ಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್‌ಗೆ, ವಕೀಲರನ್ನು ನೇಮಕಗೊಳಿಸುವುದಕ್ಕೆ ಭಾರತಕ್ಕೆ ಮತ್ತೊಂದು ಅವಕಾಶ ನೀಡಬೇಕು ಎಂದು ಪಾಕಿಸ್ತಾನ ಸರ್ಕಾರಕ್ಕೆ ಇಲ್ಲಿನ ಹೈಕೋರ್ಟ್ ನಿರ್ದೇಶಿಸಿದೆ.

ಪಾಕಿಸ್ತಾನ ಸೇನಾ ನ್ಯಾಯಾಲಯ ನೀಡಿರುವ ಮರಣ ದಂಡನೆ ಶಿಕ್ಷೆ ತೀರ್ಪು ಪುನರ್‌ಪರಿಶೀಲನೆ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಈ ನಿರ್ದೇಶನ ನೀಡಿದೆ. ‘ಜಾಧವ್ ಅವರಿಗೆ ವಕೀಲರ ನೇಮಕ ಕುರಿತ ಪಾಕಿಸ್ತಾನದ ಪ್ರಸ್ತಾಪಕ್ಕೆ ಭಾರತ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಂತರರಾಷ್ಟ್ರೀಯ ನ್ಯಾಯಾಲಯದ ತೀರ್ಪಿಗೆ ಅನುಗುಣವಾಗಿ ಪಾಕಿಸ್ತಾನವು,ಜಾಧವ್ ಅವರಿಗೆ ಕಾನ್ಸುಲರ್ ಸಂಪರ್ಕವನ್ನೂ ಒದಗಿಸಿದೆ’ ಎಂದು ಅಟರ್ನಿ ಜನರಲ್ ಖಾಲಿದ್ ಜಾವೇದ್ ಖಾನ್ ನ್ಯಾಯಾಲಯಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ‘ಜಾಧವ್ ಅವರ ಕುರಿತ ಆದೇಶಗಳನ್ನು ಭಾರತಕ್ಕೆ ಕಳುಹಿಸಿ’ ಎಂದು ಸರ್ಕಾರಕ್ಕೆ ಆದೇಶಿಸಿದ ನ್ಯಾಯಾಲಯವು, ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.