ಪುಣೆ: ‘ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಸಂತಸ ತಂದಿದೆ. ದೇಶದ ಅಭಿವೃದ್ಧಿಗೆ ಅವರು ಅಪಾರ ಕೊಡುಗೆ ನೀಡಿದ್ದಾರೆ’ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, ‘ದೇಶದ ಅಭಿವೃದ್ಧಿಗಾಗಿ ಅಡ್ವಾಣಿ ದುಡಿದಿದ್ದಾರೆ. ಅವರಿಗೆ ಭಾರತ ರತ್ನ ಗೌರವ ಸಂದಿರುವುದು ಸಂತಸ ತಂದಿದೆ’ ಎಂದರು.

ಎಲ್.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಘೋಷಿಸಿದ್ದರು. ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರ ಜನ್ಮಶತಮಾನೋತ್ಸವದ ಸಂದರ್ಭದಲ್ಲಿ ಅವರಿಗೂ ‘ಭಾರತ ರತ್ನ’(ಮರಣೋತ್ತರ) ಪ್ರಶಸ್ತಿ ಘೋಷಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.