ಪಣಜಿ: ಗೋವಾದ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದಿಂದ 40 ಗ್ರಾಮಗಳನ್ನು ಹೊರಗಿಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಬುಧವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗೋವಾದ ಪರಿಸರ ಸೂಕ್ಷ್ಮ ಪ್ರದೇಶಗಳ ಕುರಿತ ಸಮಸ್ಯೆಯನ್ನು 2019ರಿಂದ ಕೇಂದ್ರ ಪರಿಸರ ಸಚಿವಾಲಯ ಹಾಗೂ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಗಮನಕ್ಕೆ ತರುತ್ತಿದ್ದೇನೆ’ ಎಂದು ಹೇಳಿದರು.

‘ಕೇಂದ್ರ ಸರ್ಕಾರ ರಚನೆ ಮಾಡಿರುವ ಸಮಿತಿಯು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿರುವ 99 ಗ್ರಾಮಗಳ ಪೈಕಿ 40 ಗ್ರಾಮಗಳನ್ನು ಪಟ್ಟಿಯಿಂದ ಹೊರಗಿಡಬೇಕೆಂದು ಸರ್ಕಾರ ಬೇಡಿಕೆ ಇಟ್ಟಿದೆ. ಸದ್ಯ ಗುರುತಿಸಿರುವ ಈ 40 ಗ್ರಾಮಗಳನ್ನು ಬಿಟ್ಟು ಇನ್ನೂ ಹತ್ತು ಗ್ರಾಮಗಳನ್ನು ಸೇರ್ಪಡೆ ಮಾಡಲಿ. ಆಗ ಪರಿಸರ ಸೂಕ್ಷ್ಮ ಗ್ರಾಮಗಳ ಸಂಖ್ಯೆ 69 ಆಗಲಿದೆ’ ಎಂದು ತಿಳಿಸಿದರು.

ಗೋವಾದ 99 ಗ್ರಾಮಗಳು ಪರಿಸರ ಸೂಕ್ಷ್ಮ ಪ್ರದೇಶಗಳು ಎಂದು 2022ರ ಜುಲೈನಲ್ಲಿ ಕೇಂದ್ರ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.