ಪಣಜಿ: ಹೊಸದಾಗಿಚುನಾಯಿತರಾಗಿರುವ ಗೋವಾ ಶಾಸಕರ ಪ್ರಮಾಣ ವಚನ ಸ್ವೀಕರ ಸಮಾರಂಭವನ್ನು ಮಂಗಳವಾರ (ಮಾರ್ಚ್ 15) ನಡೆಸುವುದಾಗಿರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರು ತಿಳಿಸಿದ್ದಾರೆ. ಅದಕ್ಕಾಗಿ ಗೋವಾ ವಿಧಾನಸಭೆ ಅಧಿವೇಶನವನ್ನು ಅವರು ಕರೆದಿದ್ದಾರೆ.

ಶಾಸಕರಾಗಿ ಆಯ್ಕೆ ಆಗಿರುವ ಗಣೇಶ್ ಗಾಂವ್ಕರ್ ಅವರಿಗೆ ಹಂಗಾಮಿ ಸ್ಪೀಕರ್ ಆಗಿ ರಾಜ್ಯಪಾಲರು ಸೋಮವಾರ ಪ್ರಮಾಣ ವಚನ ಬೋಧಿಸಲಿದ್ದಾರೆ. ವಿಧಾನಸಭೆಯಲ್ಲಿ ಮಂಗಳವಾರ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿಗಣೇಶ್ ಅವರು ಇತರ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

40 ಸ್ಥಾನಗಳಿಗೆ ನಡೆದಿದ್ದ ಗೋವಾ ವಿಧಾನಸಭೆ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಯು ಮೂವರು ಪಕ್ಷೇತರ ಶಾಸಕರ ಬೆಂಬಲ ಪಡೆದು ಸರ್ಕಾರ ರಚಿಸುವುದಾಗಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.