ಪಣಜಿ: ಕೇರಳದ ವಯನಾಡಿನಲ್ಲಿ ಇತ್ತೀಚಿಗೆ ಸಂಭವಿಸಿದ ಭೂಕುಸಿತದಲ್ಲಿ ಸಂತ್ರಸ್ತರಾದ ಜನರಿಗೆ ತಮ್ಮ ಚಾರಿಟೇಬಲ್ ಟ್ರಸ್ಟ್ ಮನೆಗಳನ್ನು ನಿರ್ಮಿಸಿ ಕೊಡಲಿದೆ ಎಂದು ಗೋವಾ ಸ್ಪೀಕರ್ ರಮೇಶ್ ತವಾಡ್ಕರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಕೇರಳಕ್ಕೆ ಅಗತ್ಯವಿರುವ ಎಲ್ಲ ಸಹಾಯವನ್ನು ಮಾಡಲು ಗೋವಾ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

‘ಭೂಕುಸಿತ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿ ಕೊಡಲು ಬಲರಾಮ ಚಾರಿಟೇಬಲ್ ಟ್ರಸ್ಟ್ 200 ಸ್ವಯಂಸೇವಕರೊಂದಿಗೆ ಕೆಲಸ ಮಾಡಲಿದೆ. ಸದ್ಯ ಗೋವಾದಲ್ಲಿ ಅನುಷ್ಠಾನಗೊಳ್ಳುತ್ತಿರುವ ‘ಶ್ರಮ್ ಧಮ್’ ಪರಿಕಲ್ಪನೆ ಅಡಿಯಲ್ಲಿ ಈ ಮನೆಗಳನ್ನು ನಿರ್ಮಿಸಲಾಗುವುದು’ ಎಂದು ಸ್ಪೀಕರ್ ರಮೇಶ್ ತವಾಡ್ಕರ್ ತಿಳಿಸಿದ್ದಾರೆ.

ಕೇರಳದ ಸಾಮಾಜಿಕ ಸೇವೆ ಉಪಕ್ರಮಕ್ಕೆ ಹಣಕಾಸಿನ ನೆರವು ನೀಡುವಂತೆ ಗೋವಾ ವಿಧಾನಸಭೆ ಸದಸ್ಯರಲ್ಲಿ ತವಾಡ್ಕರ್ ಮನವಿ ಮಾಡಿದರು.

‘ಭೂಕುಸಿತ ಸಂಭವಿಸಿರುವ ಪ್ರದೇಶಗಳಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಾಯವನ್ನು ಮಾಡಲು ಗೋವಾ ಸರ್ಕಾರ ಸಿದ್ಧವಿದೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ, ಕೇರಳದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಕೇರಳದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಅಗತ್ಯವಿರುವ ಎಲ್ಲ ಸಹಾಯ ಮಾಡಲು ನಾವು ಸಿದ್ಧವಿದ್ದೇವೆ’ ಎಂದು ಸಾವಂತ್ ಹೇಳಿದ್ದಾರೆ.

ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 222ಕ್ಕೆ ಏರಿಕೆಯಾಗಿದೆ ಎಂದು ಕೇರಳ ಸರ್ಕಾರ ಸೋಮವಾರ ತಿಳಿಸಿದೆ.
.ವಯನಾಡು ಭೂಕುಸಿತ: ಮೃತರ ಸಂಖ್ಯೆ 221ಕ್ಕೆ ಏರಿಕೆ, ಇನ್ನೂ 180 ಮಂದಿ ನಾಪತ್ತೆ.Wayanad landslides| ದೇವರ ನಾಡಿನಲ್ಲಿ ದುರಂತ: ಬೆಚ್ಚಿಬೀಳಿಸುತ್ತಿರುವ ಊರ ನೆನಪು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.