ನವದೆಹಲಿ: ‘ಕುಡಿಯುವ ನೀರು ಪೂರೈಸುವ ಕಳಸಾ–ಬಂಡೂರಿ ಯೋಜನೆ ಕುರಿತು ಕೇಂದ್ರ ಸರ್ಕಾರ ಶೀಘ್ರದಲ್ಲೇ ತನ್ನ ನಿಲುವನ್ನು ಸ್ಪಷ್ಟಪಡಿಸಲಿದ್ದು, ಆದಷ್ಟು ಬೇಗ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಲಾಗುವುದು’ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ಬಾಕಿ ಇರುವುದರಿಂದ ಕೇಂದ್ರ ಸರ್ಕಾರವು ಕಳಸಾ–ಬಂಡೂರಿ ಯೋಜನೆಗೆ ನೀಡಿದ್ದ ಅನುಮತಿಗೆ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂದರು.

ಬಸವರಾಜ ಬೊಮ್ಮಾಯಿ ಅವರೊಂದಿಗೆ ಈ ಸಂಬಂಧ ಗುರುವಾರ ಚರ್ಚೆ ನಡೆಸಲಾಗಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಲಾಗಿದೆ ಎಂದು ಹೇಳಿದರು.

ಮಹದಾಯಿ ನೀರು ಹಂಚಿಕೆ ವಿವಾದದ ಪರಿಹಾರಕ್ಕೆ ಕೇವಲ ಎರಡು ಮಾರ್ಗಗಳಿವೆ. ಗೋವಾ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳು ಒಮ್ಮತದ ತೀರ್ಮಾನಕ್ಕೆ ಬರಬೇಕು ಅಥವಾ ಸುಪ್ರೀಂಕೋರ್ಟ್ ತೀರ್ಪು ನೀಡುವ ಮೂಲಕ ಸಮಸ್ಯೆ ಬಗೆಹರಿಸಬೇಕು ಎಂದೂತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.