ಹೈದರಾಬಾದ್: ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಬಳಿ ತಡರಾತ್ರಿ ಗೂಡ್ಸ್ ರೈಲು ಹಳಿತಪ್ಪಿದ್ದು, 20 ಪ್ರಯಾಣಿಕ ರೈಲುಗಳನ್ನು ರದ್ದುಪಡಿಸಲಾಗಿದೆ ಎಂದು ದಕ್ಷಿಣ ಕೇಂದ್ರ ರೈಲ್ವೆ (ಎಸ್ಸಿಆರ್) ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ತಡರಾತ್ರಿ ರಾಘವಪುರಂ ಮತ್ತು ರಾಮಗುಂಡಂ ನಡುವೆ ಕಬ್ಬಿಣದ ಅದಿರು ಸಾಗಿಸುತ್ತಿದ್ದ ಗೂಡ್ಸ್ ರೈಲಿನ 11 ಬೋಗಿಗಳು ಹಳಿತಪ್ಪಿವೆ.

ಇದರ ಪರಿಣಾಮ 20 ಪ್ರಯಾಣಿಕ ರೈಲುಗಳ ಸಂಚಾರನ್ನು ರದ್ದುಗೊಳಿಸಲಾಗಿದೆ, 10 ರೈಲುಗಳ ಸಂಚಾರದ ಮಾರ್ಗವನ್ನು ಬದಲಿಸಲಾಗಿದೆ. ಎರಡು ರೈಲುಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ ಎಂದು ಎಸ್ಸಿಆರ್ ವಲಯದ ಪ್ರಕಟಣೆ ತಿಳಿಸಿದೆ.

ಹಳಿಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.