ನವದೆಹಲಿ: ದೆಹಲಿ ನ್ಯಾಯಾಲಯದ ಆದೇಶದಂತೆ ಬಿಡುಗಡೆಗೊಂಡಿರುವ ವಿದ್ಯಾರ್ಥಿಗಳಾದ ನತಾಶಾ ನರ್ವಾಲ್, ದೇವಾಂಗನಾ ಕಾಲಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ, ಜೈಲಿನಲ್ಲೂ ಅಪಾರ ಬೆಂಬಲ ದೊರಕಿದ್ದು, ನಮ್ಮ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.

ಜೂನ್ 15ರಂದು ಜಾಮೀನು ಮಂಜೂರಾಗಿದ್ದ ಜಾಮಿಯಾ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ, ಜೆಎನ್‌ಯು ವಿದ್ಯಾರ್ಥಿಗಳಾದ ದೇವಾಂಗನಾ ಕಾಲಿತಾ ಮತ್ತು ನತಾಶಾ ನರ್ವಾಲ್ ಅವರನ್ನು ತಕ್ಷಣವೇ ಬಿಡುಗಡೆ ಮಾಡಲು ವಿಚಾರಣಾ ನ್ಯಾಯಾಲಯ ಗುರುವಾರ ಆದೇಶಿಸಿತ್ತು. ನ್ಯಾಯಾಲಯದ ಆದೇಶದ ಕೆಲವೇ ಗಂಟೆಗಳಲ್ಲಿ ಮೂವರು ವಿದ್ಯಾರ್ಥಿಗಳು ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ.

ಇದನ್ನೂ ಓದಿ:ದೆಹಲಿ ಗಲಭೆ: ಮೂವರು ವಿದ್ಯಾರ್ಥಿಗಳ ಬಿಡುಗಡೆಗೆ ಕೋರ್ಟ್ ಸೂಚನೆ

ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಗಲಭೆಗೆ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿ ಈ ಮೂವರನ್ನು ಕಳೆದ ವರ್ಷದ ಮೇಯಲ್ಲಿ ಬಂಧಿಸಲಾಗಿತ್ತು.

ದೆಹಲಿ ಹೈಕೋರ್ಟ್ ನಿರ್ಧಾರವನ್ನು ಸ್ವಾಗತಿಸಿರುವ ನತಾಶಾ ನರ್ವಾಲ್, 'ಜೈಲಿನಲ್ಲೂ ನಮಗೆ ಅಪಾರ ಬೆಂಬಲ ದೊರಕಿತ್ತು. ನಮ್ಮ ಹೋರಾಟ ನಿರಂತರ' ಎಂದು ಘೋಷಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ದೇವಾಂಗನಾ ಕಾಲಿತಾ, 'ಕೇಂದ್ರ ಸರ್ಕಾರವು ಜನರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದರೆ ಜನತೆಯಿಂದ ನಮಗೆ ಅಪಾರ ಬೆಂಬಲ ದೊರಕಿತು. ಇದರಿಂದಾಗಿ ಅಲ್ಲಿ (ಜೈಲಿನಲ್ಲಿ) ಬದುಕುಳಿಯಲು ಸಾಧ್ಯವಾಯಿತು' ಎಂದು ಹೇಳಿದ್ದಾರೆ.

ತಿಹಾರ್ ಜೈಲಿನಿಂದ ಹೊರಬಂದ ಜಾಮಿಯಾ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ, 'ಒಂದಲ್ಲ ಒಂದು ದಿನ ಬಿಡುಗಡೆಯಾಗುವ ನಂಬಿಕೆಯನ್ನು ಇಟ್ಟುಕೊಂಡಿದ್ದೆ. ಅಲ್ಲದೆ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ' ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.