ಐಜ್ವಾಲ್: ಭಾರತ-ಮ್ಯಾನ್ಮಾರ್ ಗಡಿಗೆ ಬೇಲಿ ಹಾಕಲು ಹಾಗೂ ಮುಕ್ತ ಸಂಚಾರವನ್ನು ಕೊನೆಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಯಾಕೆಂದರೆ ಸರ್ಕಾರವು ದೇಶದ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಗುರುವಾರ ಹೇಳಿದ್ದಾರೆ.

ಇಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

2021ರ ಫೆಬ್ರವರಿಯಲ್ಲಿ ಮ್ಯಾನ್ಮಾರ್ ನಡೆದ ಮಿಲಿಟರಿ ದಂಗೆಯ ನಂತರ ಅಲ್ಲಿಂದ ಸಾವಿರಾರು ಜನರು ಈಶಾನ್ಯ ರಾಜ್ಯಗಳಿಗೆ ಆಗಮಿಸಿದ್ದಾರೆ. ವಿಶೇಷವಾಗಿ ಮಿಜೋರಾಂನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಅವರು ಹೇಳಿದರು.

ಮಿಜೋರಾಂ ಸೇರಿದಂತೆ ದೇಶದ ಭದ್ರತೆ, ನಮ್ಮ ರಾಜ್ಯಗಳ ಭದ್ರತೆಗಾಗಿ ನಾವು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಈ ಕ್ರಮಗಳು ಒಂದು ಒಂದು ನಿರ್ದಿಷ್ಟ ಪರಿಸ್ಥಿತಿಗೆ ಪ್ರತಿಕ್ರಿಯೆಯಾಗಿವೆ ಎಂದು ನಾನು ಭಾವಿಸುತ್ತೇನೆ ಎಂದರು. ಮ್ಯಾನ್ಮಾರ್‌ನಲ್ಲಿ ಎಲ್ಲವೂ ಸಾಮಾನ್ಯವಾಗಿದ್ದರೆ, ಇದು ಸಂಭವಿಸುತ್ತಿರಲಿಲ್ಲ ಎಂದು ಜೈಶಂಕರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.