ಮುಂಬೈ: ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಶಕ್ತಿಯನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು.

ಮಹಾರಾಷ್ಟ್ರದ ಕರಾವಳಿ ಸಿಂಧುದುರ್ಗ ಜಿಲ್ಲೆಯಲ್ಲಿ ಆಯೋಜಿಸಿದ್ದ ಭಾರತೀಯ ನೌಕಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿಸಲು ಒತ್ತು ನೀಡುತ್ತಿದ್ದೇವೆ ಎಂದರು.

ಭಾರತವಿಂದು ದೊಡ್ಡ ದೊಡ್ಡ ಗುರಿಗಳನ್ನು ಇರಿಸಿಕೊಳ್ಳುತ್ತಿದೆ ಮತ್ತು ಅವುಗಳನ್ನು ಸಾಧಿಸಲು ತನ್ನ ಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುತ್ತಿದೆ. ಬಂದರು ಮೂಲಕ ಆಗುವ ಅಭಿವೃದ್ಧಿ ಕಾರ್ಯಗಳಿಗೆ ಭಾರತ ಅಭೂತಪೂರ್ವ ಬೆಂಬಲ ನೀಡುತ್ತಿದೆ. ವಾಣಿಜ್ಯೋದ್ದೇಶದ ಹಡಗು ಉದ್ಯಮವನ್ನೂ ಪ್ರೋತ್ಸಾಹಿಸಲಾಗುತ್ತಿದೆ. ಜೊತೆಗೆ ತನ್ನ ಸಾಗರಗಳ ಸಾಮರ್ಥ್ಯವನ್ನು ಬಳಸಿಕೊಳ್ಳುವತ್ತ ಮುನ್ನಡೆಯುತ್ತಿದೆ ಎಂದು ಪ್ರಧಾನಿ ಹೇಳಿದರು.

ಭಾರತೀಯ ನೌಕಾಪಡೆಯ ಶ್ರೇಣೀಕೃತ ವ್ಯವಸ್ಥೆಯನ್ನು ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಮರುನಾಮಕರಣ ಮಾಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದರು.

ನೌಕಾ ದಿನಾಚರಣೆ ಕಾರ್ಯಕ್ರಮಕ್ಕೆ ಮುನ್ನ ಮೋದಿ ಅವರು ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಬಳಿಕ ತಾರಕರಲೀ ಬೀಚ್‌ನಿಂದ ನೌಕಾಪಡೆ ಆಯೋಜಿಸಿದ್ದ ಭಾರತೀಯ ನೌಕೆಗಳು, ಜಲಾಂತರ್ಗಾಮಿಗಳು, ವಿಮಾನ ಮತ್ತು ವಿಶೇಷ ಪಡೆಗಳ ನೌಕಾ ಪ್ರದರ್ಶನಕ್ಕೆ ಮೋದಿ ಸಾಕ್ಷಿಯಾದರು.
.ನೌಕಾಪಡೆಗೆ ಭಾರತದ ಅತಿದೊಡ್ಡ ಸಮೀಕ್ಷಾ ನೌಕೆ 'ಐಎನ್ಎಸ್ ಸಂಧಾಯಕ್' ಹಸ್ತಾಂತರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.