ನವದೆಹಲಿ: 23ನೆಯ ಕಾನೂನು ಆಯೋಗವನ್ನು ರಚಿಸಿ ಕೇಂದ್ರ ಸರ್ಕಾರವು ಸೋಮವಾರ ಅಧಿಸೂಚನೆ ಹೊರಡಿಸಿದೆ. ಆಯೋಗದ ಅವಧಿಯು ಮೂರು ವರ್ಷಗಳು. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನು ಇದರ ಅಧ್ಯಕ್ಷ ಹಾಗೂ ಸದಸ್ಯರನ್ನಾಗಿ ನೇಮಕ ಮಾಡಲು ಅವಕಾಶ ಇದೆ.

22ನೆಯ ಕಾನೂನು ಆಯೋಗದ ಅವಧಿಯು ಆಗಸ್ಟ್ 31ಕ್ಕೆ ಕೊನೆಗೊಂಡಿದೆ. ಕಳೆದ ಕೆಲವು ತಿಂಗಳುಗಳಿಂದ ಇದಕ್ಕೆ ಅಧ್ಯಕ್ಷ ಇರಲಿಲ್ಲ. ಏಕರೂಪಿ ನಾಗರಿಕ ಸಂಹಿತೆಗೆ ಸಂಬಂಧಿಸಿದಂತೆ ಆಯೋಗವು ವರದಿ ಸಲ್ಲಿಸಿದೆ.

ಅಲ್ಲದೆ, ಕಾನೂನು ಆಯೋಗವು ಏಕಕಾಲದಲ್ಲಿ ಚುನಾವಣೆ ನಡೆಸುವ ಬಗ್ಗೆ ವರದಿಯೊಂದನ್ನು ಸಿದ್ಧಪಡಿಸಿದೆ. ಈ ವರದಿಯನ್ನು ಕಾನೂನು ಸಚಿವಾಲಯಕ್ಕೆ ಸಲ್ಲಿಸಬೇಕಿದೆ. ಅಧ್ಯಕ್ಷರಿಲ್ಲದೆ ವರದಿಯನ್ನು ಸಲ್ಲಿಸುವುದಕ್ಕೆ ಅವಕಾಶ ಇಲ್ಲ ಎಂದು ಮೂಲಗಳು ಹೇಳಿವೆ.

22ನೆಯ ಕಾನೂನು ಆಯೋಗದ ಅಧ್ಯಕ್ಷ ಆಗಿದ್ದ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರನ್ನು, ಕೆಲವು ತಿಂಗಳುಗಳ ಹಿಂದೆ ಲೋಕಪಾಲದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.