ನವದೆಹಲಿ: ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನಗದುರಹಿತ ಚಿಕಿತ್ಸೆ ನೀಡಲು ಸರ್ಕಾರವು ಯೋಜನೆ ರೂಪಿಸಿದ್ದು, ಈಗಾಗಲೇ ಚಂಡೀಗಢ ಮತ್ತು ಅಸ್ಸಾಂನಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ–ಜನಾರೋಗ್ಯ ಯೋಜನೆಯಡಿ ಸೇರ್ಪಡೆಯಾಗಿರುವ ಆಸ್ಪತ್ರೆಗಳಲ್ಲಿ ಗಾಯಾಳುಗಳನ್ನು ಚಿಕಿತ್ಸೆಗೆ ದಾಖಲಿಸಲಾಗುತ್ತದೆ. ಅವಘಡ ಸಂಭವಿಸಿದ ದಿನದಿಂದ ಏಳು ದಿನಗಳವರೆಗೆ ಗರಿಷ್ಠ ₹1.5 ಲಕ್ಷದವರೆಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಅವರು, ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಭಾರತೀಯ ಆರೋಗ್ಯ ಪ್ರಾಧಿಕಾರದ ಸಹಭಾಗಿತ್ವದಡಿ ವಾಹನ ಅಪಘಾತದಿಂದ ಗಾಯಗೊಂಡವರಿಗೆ ಈ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೋಟರ್ ವಾಹನಗಳ ಕಾಯ್ದೆ 1988ರ ಅಡಿ ರಚಿಸಿರುವ ಮೋಟರ್ ವಾಹನ ಅಪಘಾತ ನಿಧಿಯಡಿ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.