ನವದೆಹಲಿ:ಗ್ರಾಹಕರಿಗೆ ಮಾರುಕಟ್ಟೆ ದರದಲ್ಲಿ ಅಡುಗೆ ಅನಿಲ ಸಿಲಿಂಡರ್ ಪೂರೈಕೆ ಮಾಡಿ, ಸಹಾಯಧನವನ್ನು (ಸಬ್ಸಿಡಿ) ಅವರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಪದ್ಧತಿಗೆ ಕೊನೆ ಹಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಪೆಟ್ರೋಲಿಯಂ ಸಚಿವಾಲಯದ ಮೂಲಗಳು ಹೇಳಿವೆ.

ಗ್ರಾಹಕರಿಗೆ ಸಬ್ಸಿಡಿ ದರದಲ್ಲೇ ಅಡುಗೆ ಅನಿಲ ಸಿಲಿಂಡೆರ್ ಪೂರೈಕೆ ಮಾಡುವ ಹಿಂದಿನ ಪದ್ಧತಿ ಶೀಘ್ರ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಸಬ್ಸಿಡಿಗೆ ಅರ್ಹರಾಗಿರುವ ಗ್ರಾಹಕರ ಬ್ಯಾಂಕ್ ಖಾತೆಗಳಿಗೆ ಹಲವು ತಿಂಗಳಿಂದ ಹಣ ಜಮೆ ಆಗಿಲ್ಲ. ಈ ಬಗ್ಗೆ ದೂರುಗಳು ಬಂದಿದ್ದವು. ಅಲ್ಲದೆ ಅಡುಗೆ ಅನಿಲ ಸಿಲಿಂಡರ್ ಬೆಲೆಯೂ ₹ 900ಕ್ಕಿಂತ ಹೆಚ್ಚಾಗಿತ್ತು. ಗ್ರಾಹಕರಿಗೆ ಹೊರೆಯಾಗುತ್ತಿರುವ ಕಾರಣ ಗ್ರಾಮೀಣ ಭಾಗದಲ್ಲಿ ಅಡುಗೆ ಅನಿಲ (ಎಲ್ಪಿಜಿ) ಬಳಕೆ ಕಡಿಮೆಯಾಗಿದೆ. ಹಲವರು ಸೌದೆ ಒಲೆ ಬಳಕೆಗೆ ಮರಳಿದ್ದಾರೆ. ಹೀಗಾಗಿ ಈ ಕ್ರಮದ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ಹೇಳಿವೆ.

ಈಗ ದೇಶದಲ್ಲಿ 24 ಕೋಟಿ ಕುಟುಂಬಗಳು ಎಲ್ಪಿಜಿ ಬಳಸುತ್ತಿವೆ. ಮುಂದಿನ 18 ತಿಂಗಳಲ್ಲಿ ಈ ಸಂಖ್ಯೆ 36 ಕೋಟಿಗೆ ಏರಿಕೆಯಾಗುವ ನಿರೀಕ್ಷೆಯಿದೆ. ಸರ್ಕಾರದ ಈ ಕ್ರಮದಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.

ಸರ್ಕಾರದ ಈ ಕ್ರಮದಿಂದ ಕೋಟ್ಯಂತರ ಜನರಿಗೆ ನೇರವಾಗಿ ಅನುಕೂಲವಾಗಲಿದೆ. ಇದು ಅತ್ಯಂತ ದೊಡ್ಡ ಮತಬ್ಯಾಂಕ್. ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದೂ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.