ನವದೆಹಲಿ: ಉತ್ತರ ಪ್ರದೇಶದ ಅಮೇಠಿಯ ಕೊರ್ವಾದಲ್ಲಿ ಐದು ಲಕ್ಷಕ್ಕೂ ಹೆಚ್ಚು ಎಕೆ–203 ರೈಫಲ್ಗಳನ್ನು ಉತ್ಪಾದಿಸುವ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದು ರಕ್ಷಣಾ ಸಾಮಗ್ರಿಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಕೈಗೊಂಡ ಮಹತ್ವದ ನಿರ್ಧಾರವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಮೂಲಕ ಉತ್ತರ ಪ್ರದೇಶವು ಭಾರತದ ರಕ್ಷಣಾ ಉತ್ಪಾದನಾ ಕೇಂದ್ರವಾಗುವ ಹಾದಿಯಲ್ಲಿದೆ. ಈ ಯೋಜನೆಯು ಸ್ಥಳೀಯವಾಗಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಮತ್ತು ಕಚ್ಚಾ ವಸ್ತುಗಳ ಪೂರೈಕೆಗಾಗಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್ಎಂಇ) ಅವಕಾಶ ಒದಗಿಸಲಿದೆ.

ರಷ್ಯಾದ ಸಹಭಾಗಿತ್ವದಲ್ಲಿ ಕೈಗೊಳ್ಳುತ್ತಿರುವ ಈ ಯೋಜನೆಯು ರಕ್ಷಣಾ ವಲಯದಲ್ಲಿ ಎರಡೂ ದೇಶಗಳ ನಡುವಿನ ಆಳವಾದ ಪಾಲುದಾರಿಕೆಯನ್ನು ಪ್ರತಿಬಿಂಬಿಸುತ್ತದೆ.

ಮೂರು ದಶಕಗಳ ಹಿಂದೆ ಸೇನೆಗೆ ಸೇರ್ಪಡೆಯಾಗಿರುವ ‘ಇನ್ಸಾಸ್‘ ರೈಫಲ್ಗಳ ಸ್ಥಾನವನ್ನು ಎಕೆ–203 ರೈಫಲ್ಗಳು ತುಂಬಲಿವೆ. ಹಗುರ ಮತ್ತು ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡ ಈ ರೈಫಲ್ನಿಂದ 300 ಮೀಟರ್ ಗುರಿಗೆ ನಿಖರವಾಗಿ ದಾಳಿ ನಡೆಸಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.

ಇವು ಸೈನಿಕರ ಯುದ್ಧ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸಲು ನೆರವಾಗುತ್ತವೆ. ಭಯೋತ್ಪಾದನೆ ಮತ್ತು ಬಂಡಾಯ ನಿಗ್ರಹ ಕಾರ್ಯಚಾರಣೆಗಳಲ್ಲಿ ಭಾರತೀಯ ಸೇನೆಯ ಕಾರ್ಯಾಚರಣೆಗಳಿಗೆ ಪರಿಣಾಮಕಾರಿ ಅಸ್ತ್ರವಾಗಲಿವೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.