ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ, ಸಾರ್ವಜನಿಕ ವಲಯದ ಬ್ಯಾಂಕುಗಳನ್ನು 'ಗೆಳೆಯರಿಗೆ' ಮಾರಾಟ ಮಾಡುವುದರಿಂದ ದೇಶದ ಆರ್ಥಿಕ ಭದ್ರತೆಗೆ ಧಕ್ಕೆಯುಂಟಾಗುತ್ತದೆ ಎಂದು ಆರೋಪಿಸಿದ್ದಾರೆ.

ಭಾರತ ಸರ್ಕಾರವು 'ಲಾಭವನ್ನು ಖಾಸಗೀಕರಣಗೊಳಿಸುತ್ತಿದೆ' ಮತ್ತು 'ನಷ್ಟವನ್ನು ರಾಷ್ಟ್ರೀಕರಣಗೊಳಿಸುತ್ತಿದೆ'. ಸಾರ್ವಜನಿಕ ವಲಯ ಬ್ಯಾಂಕುಗಳನ್ನು ಮೋದಿಕ್ರೋನಿಗಳಿಗೆ ಮಾರಾಟ ಮಾಡುವುದರಿಂದ ಭಾರತದ ಆರ್ಥಿಕ ಭದ್ರತೆಗೆ ಧಕ್ಕೆಯಾಗುತ್ತದೆ' ಎಂದಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕುಗಳ ಖಾಸಗೀಕರಣದ ವಿರುದ್ಧ ಎರಡು ದಿನಗಳ ಮುಷ್ಕರ ನಡೆಸುತ್ತಿರುವ ಪ್ರತಿಭಟನಾ ನಿರತ ಬ್ಯಾಂಕ್ ನೌಕರರಿಗೂ ಕಾಂಗ್ರೆಸ್ ನಾಯಕ ಬೆಂಬಲ ಘೋಷಿಸಿದ್ದಾರೆ. 'ನಾನು ಮುಷ್ಕರ ನಿರತ ಬ್ಯಾಂಕ್ ಉದ್ಯೋಗಿಗಳ ಪರವಾಗಿ ನಿಲ್ಲುತ್ತೇನೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.

ದೇಶದ ಸಾರ್ವಜನಿಕ ವಲಯದ ಬ್ಯಾಂಕುಗಳ ಒಂಬತ್ತು ಒಕ್ಕೂಟಗಳ (ಪಿಎಸ್‌ಬಿ) ನೇತೃತ್ವದ ಬ್ಯಾಂಕ್ ಮುಷ್ಕರವು ಎರಡನೇ ದಿನವಾದ ಮಂಗಳವಾರವೂ ಮುಂದುವರಿದಿದೆ.

ನಗದು ಹಿಂಪಡೆಯುವಿಕೆ, ಠೇವಣಿ, ಚೆಕ್ ಕ್ಲಿಯರೆನ್ಸ್, ರವಾನೆ ಸೇವೆಗಳಂತಹ ಸೇವೆಗಳನ್ನು ಪಡೆಯಲು ಗ್ರಾಹಕರು ತೊಂದರೆ ಅನುಭವಿಸುತ್ತಿದ್ದಾರೆ. ಖಜಾನೆಗೆ ಸಂಬಂಧಿಸಿದ ಸರ್ಕಾರಿ ವಹಿವಾಟುಗಳು ಮತ್ತು ವ್ಯವಹಾರ ವಹಿವಾಟುಗಳ ಮೇಲೂ ಪರಿಣಾಮ ಬೀರುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.