ನವದೆಹಲಿ: ಅರಣ್ಯ ಭೂಮಿಯಲ್ಲಿನ ಗಡಿ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಅನುಮೋದನೆಯ ಅಗತ್ಯ ಕೈಬಿಡಲು ಅರಣ್ಯ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತರಲು ಪರಿಸರ ಸಚಿವಾಲಯ ಮುಂದಾಗಿದೆ.

ಇದು ನಿರ್ಣಾಯಕ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬಕ್ಕೆ ಕಾರಣವಾಗುತ್ತಿತ್ತು ಎಂದು ಸಚಿವಾಲಯ ಸಮರ್ಥನೆ ನೀಡಿದೆ.

ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಗಳ ಕುರಿತು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಸಂಬಂಧಪಟ್ಟ ಎಲ್ಲ ಜನರಿಂದ ಸಚಿವಾಲಯವು ಸಲಹೆಗಳನ್ನು ಆಹ್ವಾನಿಸಿದೆ.

‘ನಮ್ಮ ಗಡಿಗಳನ್ನು ಹಾಗೆಯೇ ಉಳಿಸಿಕೊಳ್ಳಲು ಮತ್ತು ದೇಶದ ಸಾರ್ವಭೌಮತೆ ಎತ್ತಿಹಿಡಿಯಲು ಅಂತರರಾಷ್ಟ್ರೀಯ ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಯು ನಿರ್ಣಾಯಕವಾಗಿದೆ. ಅರಣ್ಯ ಭೂಮಿಯನ್ನು ಅರಣ್ಯೇತರ ಬಳಕೆಗಾಗಿ ಅನುಮೋದನೆ ಪಡೆಯುವಾಗ ಅನೇಕ ಬಾರಿ, ರಾಷ್ಟ್ರೀಯ ಮಹತ್ವದ ಕಾರ್ಯತಂತ್ರದ ಮತ್ತು ಭದ್ರತಾ ಯೋಜನೆಗಳು ವಿಳಂಬವಾಗುತ್ತವೆ. ನಿರ್ಣಾಯಕ ಸ್ಥಳಗಳಲ್ಲಿ ಇಂತಹ ಮೂಲಸೌಕರ್ಯಗಳ ಅಭಿವೃದ್ಧಿಗೂ ಹಿನ್ನಡೆಯಾಗುತ್ತದೆ’ ಎಂದಿರುವ ಸಚಿವಾಲಯವು, ಅಂತಹ ಯೋಜನೆಗಳಿಗೆ ಕಾಯ್ದೆಯ ಅಡಿಯಲ್ಲಿ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯುವುದರಿಂದ ವಿನಾಯಿತಿ ನೀಡಬೇಕೆಂಬ ಪ್ರಸ್ತಾವ ಇಟ್ಟಿದೆ.

ನಿರ್ದಿಷ್ಟ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕಾದ ಇಂತಹ ಕಾರ್ಯತಂತ್ರದ ಮತ್ತು ಭದ್ರತಾ ಯೋಜನೆಗಳ ಅನುಷ್ಠಾನಕ್ಕಾಗಿ ಅರಣ್ಯ ಭೂಮಿಯನ್ನು ಅರಣ್ಯೇತರ ಬಳಕೆಗೆ ಅನುಮತಿಸಲು ರಾಜ್ಯಗಳಿಗೆ ಅವಕಾಶ ನೀಡಬೇಕೆಂಬ ಪ್ರಸ್ತಾಪವನ್ನೂಪರಿಸರ ಸಚಿವಾಲಯ ಇಟ್ಟಿದೆ.

ಅರಣ್ಯ ಸಂರಕ್ಷಣಾ ಕಾಯ್ದೆ ಅಸ್ತಿತ್ವಕ್ಕೆ ಬಂದ 1980ಕ್ಕಿಂತ ಮೊದಲು ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಸರ್ಕಾರದ ಅನುಮೋದನೆಯಿಂದ ವಿನಾಯಿತಿ ನೀಡಲು ಸಚಿವಾಲಯವು ಯೋಜಿಸಿದೆ. ಇದು ರೈಲ್ವೆ ಮತ್ತು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಸೇರಿ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಅಸಮಾಧಾನಕ್ಕೂ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.