ಬುಧವಾರ, 25 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವರದಿಗೆ ಹೆಚ್ಚಿನ ಸಮಯ ಕೋರಿದ ಕೇಂದ್ರ

Published : 25 ಸೆಪ್ಟೆಂಬರ್ 2024, 16:28 IST
Last Updated : 25 ಸೆಪ್ಟೆಂಬರ್ 2024, 16:28 IST
ಫಾಲೋ ಮಾಡಿ
Comments

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಮೇ 5ರಂದು ನಡೆಸಿದ ‘ನೀಟ್ ಯುಜಿ–2024’ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ನಂತರ ರಚಿಸಿರುವ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಸಲ್ಲಿಸಲು ಹೆಚ್ಚಿನ ಸಮಯ ಬೇಕು ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಾಜಿ ಅಧ್ಯಕ್ಷ ಡಾ.ಕೆ. ರಾಧಾಕೃಷ್ಣನ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಇದು ಸೆಪ್ಟೆಂಬರ್ 30ರಂದು ವರದಿ ಸಲ್ಲಿಸಬೇಕಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ನಡೆಸುವ ಪರೀಕ್ಷೆಯು ಪಾರದರ್ಶಕವಾಗಿ, ನ್ಯಾಯಸಮ್ಮತವಾಗಿ ನಡೆಯುವಂತೆ ಮಾಡಲು ತೆಗೆದುಕೊಳ್ಳಬೇಕಿರುವ ಕ್ರಮಗಳನ್ನು ಸಮಿತಿಯು ಸೂಚಿಸಬೇಕಿದೆ. ಆದರೆ ಹೆಚ್ಚುವರಿಯಾಗಿ ಮೂರು ವಾರಗಳ ಸಮಯ ಬೇಕು ಎಂದು ಕೇಂದ್ರವು ಕೇಳಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT