ನವದೆಹಲಿ: ಎಲ್ಲಾ ರೀತಿಯ ವಾಹನಗಳಲ್ಲಿ ಸೀಟ್ ಬೆಲ್ಟ್ ಎಚ್ಚರಿಕೆ ಸಾಧನ ಅಳವಡಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಲಿದೆ. ಈ ಬಗ್ಗೆ ಕೇಂದ್ರದ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಸುಳಿವು ನೀಡಿದ್ದಾರೆ.

ಈ ವರ್ಷದ ಮಾರ್ಚ್ ನಂತರ ತಯಾರಾಗುವ ಕಾರುಗಳಲ್ಲಿ ಸೀಟ್ ಬೆಲ್ಟ್ ಎಚ್ಚರಿಕೆ ಸಾಧನ, ಚಾಲಕರಿಗೆ ಏರ್ ಬ್ಯಾಗ್, ವೇಗ ಎಚ್ಚರಿಕೆ ವ್ಯವಸ್ಥೆ ಹಾಗೂ ರಿವರ್ಸ್ ಪಾರ್ಕಿಂಗ್ ಎಚ್ಚರಿಕೆ ಸಾಧನ ಕಡ್ಡಾಯವಾಗಲಿದೆ.

2020ರ ವೇಳೆಗೆ ರಸ್ತೆ ಅಪಘಾತಗಳನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡುವ ಗುರಿಯನ್ನು ಸರ್ಕಾರ ಇಟ್ಟುಕೊಂಡಿದೆ. ಇದರಿಂದಾಗಿ, ಭಾರತದಲ್ಲಿ ಮಾರಾಟವಾಗುವ ಕಾರುಗಳಲ್ಲಿ ಜಾಗತಿಕ ಮಟ್ಟದ ಗುಣಮಟ್ಟ ಇರಲು ಸಾರಿಗೆ ಸಚಿವಾಲಯ ಸುರಕ್ಷತಾ ವ್ಯವಸ್ಥೆಗಳಿರುವಂತೆ ನೋಡಿಕೊಳ್ಳುತ್ತಿದೆ. ಪ್ರತಿ ವರ್ಷ ಭಾರತದಲ್ಲಿ 1.5 ಲಕ್ಷ ಜನ ರಸ್ತೆ ಅಪಘಾತಗಳಲ್ಲಿ ಮೃತಪಡುತ್ತಿದ್ದಾರೆ.

ದೇಶದಾದ್ಯಂತ ಅಪಘಾತ ವಲಯಗಳನ್ನು ಗುರುತಿಸಲು ಸರ್ಕಾರ ₹20 ಸಾವಿರ ಕೋಟಿಗೂ ಹೆಚ್ಚು ಹಣವನ್ನು ವ್ಯಯಿಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.