ನವದೆಹಲಿ: ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಸಮಿತಿಗೆ ಕೆಲ ಸದಸ್ಯರ ಹೆಸರನ್ನು ಸೂಚಿಸುವಂತೆ ರೈತ ಸಂಘಟನೆಗಳಿಗೆ ಹೇಳಲಾಗಿತ್ತು. ಆದರೆ ಈವರೆಗೆ ಯಾವುದೇ ಹೆಸರುಗಳನ್ನು ಸಲ್ಲಿಸಲಾಗಿಲ್ಲ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಬುಧವಾರ ತಿಳಿಸಿದರು.

ಕಳೆದ ವರ್ಷ ನವೆಂಬರ್‌ನಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದರು. ಇದೇ ವೇಳೆ ಹೆಚ್ಚು ಪರಿಣಾಮಕಾರಿ ಮತ್ತು ಪಾರದರ್ಶಕ ವ್ಯವಸ್ಥೆಗಾಗಿಕನಿಷ್ಠ ಬೆಂಬಲ ಬೆಲೆ ನಿಗದಿ ಸಮಿತಿಯನ್ನು ರೂಪಿಸುವುದಾಗಿ ಅವರು ಭರವಸೆ ನೀಡಿದ್ದರು.

‘ನಾವು ಎಂಎಸ್‌ಪಿ ಸಮಿತಿಗಾಗಿ 2–3 ಸದಸ್ಯರ ಹೆಸರನ್ನು ನೀಡುವಂತೆ ರೈತ ಸಂಘಟನೆಗಳಿಗೆ ಹೇಳಿದ್ದೆವು. ಆದರೆ ಈವರೆಗೆ ನಮ್ಮ ಬಳಿ ಯಾವುದೇ ಹೆಸರುಗಳ ಪಟ್ಟಿ ಬಂದಿಲ್ಲ’ ಎಂದು ಅವರು ಹೇಳಿದರು.

‘ಸಮಿತಿ ರಚನೆಯಲ್ಲಿ ವಿಳಂಬ ಉಂಟಾಗಿಲ್ಲ.ರೈತ ಸಂಘಟನೆಗಳ ಪ್ರತಿನಿಧಿಗಳು ಹೆಸರು ಸಲ್ಲಿಸಿದ ಕೂಡಲೇ ಎಂಎಸ್‌ಪಿ ಸಮಿತಿಯನ್ನು ರಚಿಸಲಾಗುವುದು’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.