ನವದೆಹಲಿ: ‘ಕಾರು ಚಾಲನೆ ವೇಳೆ ಸೀಟ್ ಬೆಲ್ಟ್ ಧರಿಸುವುದರ ಮಹತ್ವವನ್ನು ನಾಗರಿಕರಿಗೆ ಮನದಟ್ಟು ಮಾಡಿಸುವುದಕ್ಕಾಗಿ ಜಾಗೃತಿ ಅಭಿಯಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಇದರಲ್ಲಿ ಕ್ರಿಕೆಟಿಗರು ಹಾಗೂ ಬಾಲಿವುಡ್ ನಟರನ್ನು ತೊಡಗಿಸಿಕೊಳ್ಳಲಾಗುತ್ತದೆ’ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿತಿಳಿಸಿದ್ದಾರೆ.

ಟಾಟಾ ಸನ್ಸ್ನ ಮಾಜಿ ಮುಖ್ಯಸ್ಥ ಸೈರಸ್ ಮಿಸ್ತ್ರಿ ಅವರು ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಗಡ್ಕರಿ ಅವರು ರಸ್ತೆ ಸುರಕ್ಷತೆ ಕ್ರಮಗಳ ಕುರಿತು ಮಂಗಳವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ.

‘ಎಲ್ಲಾ ಕಾರುಗಳೂ ಆರು ಏರ್ ಬ್ಯಾಗ್ ಹೊಂದುವುದನ್ನು ಕಡ್ಡಾಯಗೊಳಿಸಲು ಸಾರಿಗೆ ಸಚಿವಾಲಯ ಚಿಂತಿಸಿದೆ. ಸೀಟ್ ಬೆಲ್ಟ್ ಧರಿಸದ ಪ್ರಯಾಣಿಕರನ್ನು ಎಚ್ಚರಿಸಲು ಒಂದು ಬಗೆಯ ಶಬ್ದ ಹೊರಹೊಮ್ಮುವ ವ್ಯವಸ್ಥೆ ಕಾರುಗಳಲ್ಲಿತ್ತು. ಆ ಶಬ್ದ ನಿಯಂತ್ರಿಸುವ ಸಾಧನವೊಂದನ್ನು ಕಾರುಗಳಲ್ಲಿ ಬಳಸಲಾಗುತ್ತಿತ್ತು. ಅದರ ಉತ್ಪಾದನೆಯನ್ನು ಈಗಾಗಲೇ ನಿಷೇಧಿಸಲಾಗಿದೆ’ ಎಂದು ಹೇಳಿದ್ದಾರೆ.

‘ಹಿಂಬದಿಯಲ್ಲಿ ಕೂರುವವರು ಸೀಟ್ ಬೆಲ್ಟ್ ಧರಿಸುವ ಅಗತ್ಯವಿಲ್ಲ ಎಂಬ ಭಾವನೆ ಜನರಲ್ಲಿದೆ. ಅದು ತಪ್ಪು. ಕಾರಿನ ಮುಂಬದಿ ಹಾಗೂ ಹಿಂಬದಿಯಲ್ಲಿ ಕೂರುವವರು ಸೀಟ್ ಬೆಲ್ಟ್ ಧರಿಸಬೇಕು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.