ನವದೆಹಲಿ: ‘ದೇಶದಲ್ಲಿ 2047ರ ವೇಳೆಗೆ ಇಂಧನ ಸ್ವಾವಲಂಬನೆ ಸಾಧಿಸುವುದೇ ನಮ್ಮ ಸಂಕಲ್ಪ’ ಎಂದು ಆಹಾರ, ಗ್ರಾಹಕ ವ್ಯವಹಾರ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಂಗಳವಾರ ಇಲ್ಲಿ ಹೇಳಿದರು.

ಎನ್‌ಡಿಎ ಮೈತ್ರಿ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು. ಶುದ್ಧ ಇಂಧನ ಒದಗಿಸುವ ಜತೆಗೆ ಇಂಧನ ಭದ್ರತೆ ಕಲ್ಪಿಸುವ ಮೂಲಕ ಭಾರತವನ್ನು ಜಾಗತಿಕವಾಗಿ ಬಲಿಷ್ಠಗೊಳಿಸುವ ಸಂಕಲ್ಪ ಮಾಡಲಾಗಿದೆ ಎಂದರು.

ಹೊಸ ಮತ್ತು ನವೀಕರಿಸಬಹುದಾದ ಇಂಧನದಲ್ಲಿ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ರೂಪಿಸುವ ದೃಷ್ಟಿಯೊಂದಿಗೆ ಹೊಸ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡು ಮುಂದುವರಿಯುತ್ತೇವೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದ ಜನರಿಗೆ ಆಹಾರ ಭದ್ರತೆ ಖಾತರಿಪಡಿಸಲು ಬದ್ಧರಾಗಿದ್ದೇವೆ ಮತ್ತು ದೇಶದಲ್ಲಿ ನೈಸರ್ಗಿಕ ಕೃಷಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.

ಜೋಶಿ ಅವರು ತಮ್ಮ ಕಚೇರಿಯಲ್ಲಿ ತಮ್ಮ ಕುಟುಂಬ ಮತ್ತು ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಲಕ್ಷ್ಮಿ ಪೂಜೆ ನೆರವೇರಿಸುವ ಮೂಲಕ ಕಾರ್ಯಾರಂಭ ಮಾಡಿದರು.

ನೂತನ ಖಾತೆಗಳ ಅಧಿಕಾರ ವಹಿಸಿಕೊಂಡ ಬಳಿಕ ಅವರು ಆಯಾ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸೋಮಣ್ಣ ಅಧಿಕಾರ ಸ್ವೀಕಾರ: ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ವಿ.ಸೋಮಣ್ಣ ಅವರು ರೈಲ್ವೆ ಭವನದಲ್ಲಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪ್ರಲ್ಹಾದ ಜೋಶಿ, ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ.ಗದ್ದಿಗೌಡರ್, ಮಾಜಿ ಸಂಸದರಾದ ಜಿ.ಎಸ್.ಬಸವರಾಜ್, ಉಮೇಶ್ ಜಾಧವ್ ಇದ್ದರು.

ಬಳಿಕ ಸೋಮಣ್ಣ ಮಾತನಾಡಿ, ‘ಕಳೆದ 10 ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ರೈಲ್ವೆ ಕ್ಷೇತ್ರ ಗಮನಾರ್ಹ ಪ್ರಗತಿ ಕಂಡಿದೆ. ದೇಶದ 140 ಕೋಟಿ ಜನರಿಗೆ ರೈಲ್ವೆ ಯೋಜನೆಗಳನ್ನು ತಲುಪಿಸಲು ಪ್ರಯತ್ನ ಮಾಡುತ್ತೇನೆ. ವಿಕಸಿತ ಭಾರತ ಕನಸು ನನಸು ಮಾಡಲು ಶ್ರಮಿಸುತ್ತೇನೆ’ ಎಂದರು.

ಅತೀ ಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆ, ಕಾರ್ಮಿಕ ಉದ್ಯೋಗ ಸಚಿವರಾಗಿ ಶೋಭಾ ಕರಂದ್ಲಾಜೆ ಅಧಿಕಾರ ವಹಿಸಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.