ನವದೆಹಲಿ (ಪಿಟಿಐ): ಅಂತರರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಗತಿಯಲ್ಲಿ ಮಹಿಳೆಯರ ಪಾತ್ರವನ್ನು ಶ್ಲಾಘಿಸಿದ್ದಾರೆ. ಅಲ್ಲದೆ ಮಹಿಳಾ ಸಬಲೀಕರಣಕ್ಕಾಗಿ ತಮ್ಮ ಸರ್ಕಾರ ಕೆಲಸ ಮಾಡುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.

‘ನಮ್ಮ ನಾರಿ ಶಕ್ತಿಯ ಸಾಧನೆ ಮತ್ತು ದೇಶದ ಪ್ರಗತಿಯಲ್ಲಿ ಮಹಿಳೆಯ ಪಾತ್ರವನ್ನು ನಾವು ಬಹಳವಾಗಿ ಗೌರವಿಸುತ್ತೇವೆ’ ಎಂದು ಮೋದಿ ಅವರು ಬುಧವಾರ ಟ್ವೀಟ್ ಮಾಡಿದ್ದಾರೆ.

‘ಮಹಿಳಾ ಸಬಲೀಕರಣಕ್ಕೆ ನಮ್ಮ ಸರ್ಕಾರ ಮತ್ತಷ್ಟು ಕೆಲಸಗಳನ್ನು ಮಾಡುತ್ತದೆ’ ಎಂದಿರುವ ಅವರು, ‘ನಾರಿ ಶಕ್ತಿ ಫಾರ್ ನ್ಯೂ ಇಂಡಿಯಾ’ ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

‘ಮನ್ ಕಿ ಬಾತ್’ನಲ್ಲಿ ತಮ್ಮ ಜೀವನ ಪಯಣವನ್ನು ವಿವರಿಸಿದ ಮಹಿಳಾ ಸಾಧಕರ ಸಂಕಲನವನ್ನು ಪ್ರಧಾನಿ ಮೋದಿ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ ಸಿಂಗ್ ಮತ್ತು ವಿದೇಶಾಂಗ ವ್ಯವಹಾರ ಸಚಿವ ಎಸ್. ಜೈಶಂಕರ್ ಅವರು ಸಹ ಟ್ವೀಟ್‌ನಲ್ಲಿ ನಾರಿಯ ಶಕ್ತಿಯ ಸಾಧನೆಗಳನ್ನು ಶ್ಲಾಘಿಸಿದ್ದಾರೆ.

ಓಯೊ ಕಂಪನಿ ಸಂಸ್ಥಾಪಕ ರಿತೇಶ್ ಅಗರ್ವಾಲ್ ವಿವಾಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.