ನವದೆಹಲಿ: ‘ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಪ್ರದಾನ ಮಾಡುವಾಗ, ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಗೌರವ ತೋರಿದ್ದಾರೆ’ ಎಂದು ಕಾಂಗ್ರೆಸ್ ಆರೋಪಿಸಿದೆ.

ಮುರ್ಮು ಅವರು ಅಡ್ವಾಣಿ ನಿವಾಸದಲ್ಲಿ ಭಾರತ ರತ್ನ ಪ್ರದಾನ ಮಾಡುವ ಚಿತ್ರಗಳನ್ನು ಜೈರಾಮ್ ರಮೇಶ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಚಿತ್ರಗಳಲ್ಲಿ ಅಡ್ವಾಣಿ ಮತ್ತು ಮೋದಿ ಕುರ್ಚಿಗಳಲ್ಲಿ ಆಸೀನರಾಗಿದ್ದರೆ, ರಾಷ್ಟ್ರಪತಿ ನಿಂತಿದ್ದಾರೆ. ‘ನಮ್ಮ ರಾಷ್ಟ್ರಪತಿಗೆ ಅಗೌರವ ತೋರಲಾಗಿದೆ. ಪ್ರಧಾನಿ ನಿಂತಿರಬೇಕಿತ್ತು’ ಎಂದು ಚಿತ್ರಗಳ ಜೊತೆಗೆ ಉಲ್ಲೇಖಿಸಿದ್ದಾರೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ‘ಇಂಡಿಯಾ’ ರ್ಯಾಲಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಆರ್ಜೆಡಿ ನಾಯಕ ತೇಜಸ್ವಿ ಯಾದವ್, ‘ರಾಷ್ಟ್ರಪತಿಯವರಿಗೆ ಗೌರವ ಕೊಡಲಿಕ್ಕಾಗಿ ಮೋದಿ ಎದ್ದು ನಿಂತಿಲ್ಲ. ಬಿಜೆಪಿಯವರಿಗೆ ಸಂವಿಧಾನದಲ್ಲಿ ನಂಬಿಕೆಯಿಲ್ಲ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.