ತಿರುವನಂತಪುರ: ಕೆಲವು ತಿಂಗಳಿಂದ ಯುದ್ಧಭೂಮಿಯಂತಾಗಿದ್ದ ಶಬರಿಮಲೆ ಶಾಂತವಾಯಿತು ಎನ್ನುವಷ್ಟರಲ್ಲಿ ಮತ್ತೆ ಉದ್ವಿಗ್ನಗೊಂಡಿದೆ.

ಭಾನುವಾರ ಬೆಳಿಗ್ಗೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಪ್ರವೇಶಿಸಲು ಯತ್ನಿಸಿದ ತಮಿಳುನಾಡಿನ 11 ಮಹಿಳೆಯರ ಗುಂಪೊಂದನ್ನು ಪ್ರತಿಭಟನಾಕಾರರು ತಡೆದ ಕಾರಣ ಪರಿಸ್ಥಿತಿ ಬಿಗಡಾಯಿಸಿದೆ.

ಅರಣ್ಯದ ಕಾಲುದಾರಿಯಲ್ಲಿ ದೇವಸ್ಥಾನದತ್ತ ತೆರಳಲು ಯತ್ನಿಸಿದ ಮಹಿಳೆಯರನ್ನೂ ಪ್ರತಿಭಟನಾಕಾರರು ಅಡ್ಡಗಟ್ಟಿದರು. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರೂ ಪರಿಸ್ಥಿತಿ ತಿಳಿಯಾಗಲಿಲ್ಲ.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಮಹಿಳೆಯರು ಸಮೀಪದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಕೊಠಡಿಯೊಳಗೆ ಓಡಿ ಹೋಗಿ ರಕ್ಷಣೆ ಪಡೆದರು.

‘ನಾವು ಯಾವುದೇ ಸಂಘಟನೆಗೆ ಸೇರಿದ ಕಾರ್ಯಕರ್ತರಲ್ಲ. ಅಯ್ಯಪ್ಪನ ಭಕ್ತರಾದ ನಾವು ಇರುಮುಡಿ ಹೊತ್ತು ಇಲ್ಲಿಗೆ ಬಂದಿದ್ದೇವೆ’ ಎಂದು ತಮಿಳುನಾಡಿನಿಂದ ಬಂದಿದ್ದ ಮಹಿಳೆಯರ ಗುಂಪಿನ ನಾಯಕಿ ವಾಸಂತಿ ತಿಳಿಸಿದರು.

ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ರಾಜ್ಯದಾದ್ಯಂತ ನಾಮಜಪ ಮಾಡುವ ಮೂಲಕ ಮತ್ತೆ ಪ್ರತಿಭಟನೆ ಆರಂಭಿಸಿದ ಕಾರಣ ಕೇರಳದಲ್ಲಿ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧಿಕೃತ ನಿವಾಸದ ಎದುರು ಕೆಲವು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.