ನವದೆಹಲಿ: ಡಿಜಿಟಲ್ ಪಾವತಿಗೆ ಉತ್ತೇಜನ ನೀಡುವ ಉದ್ದೇಶದಿಂದ ‘ಕ್ಯಾಷ್ಬ್ಯಾಕ್’ ಸೌಲಭ್ಯವನ್ನು ಜಾರಿಗೆ ತರಲು ಜಿಎಸ್ಟಿ ಮಂಡಳಿ ಒಪ್ಪಿಗೆ ನೀಡಿದೆ.

ಸರಕು ಮತ್ತು ಸೇವೆಗಳಿಗೆ ಗ್ರಾಹಕರು ರೂಪೇ ಅಥವಾ ಭೀಮ್ ಆ್ಯಪ್ ಮೂಲಕ ಹಣ ಪಾವತಿಸಿದರೆ ಒಟ್ಟು ಮೊತ್ತದಲ್ಲಿ ಶೇ 20 ರಷ್ಟು ಕ್ಯಾಷ್ಬ್ಯಾಕ್ ಸಿಗಲಿದೆ. ಗರಿಷ್ಠ ಕ್ಯಾಷ್ಬ್ಯಾಕ್ ಮೊತ್ತ ₹ 100ಕ್ಕೆ ಮಿತಿಗೊಳಿಸಲಾಗಿದೆ.

‘ಸ್ವಯಂಪ್ರೇರಿತರಾಗಿ ಮುಂದೆ ಬರುವ ರಾಜ್ಯಗಳಲ್ಲಿ ಪ್ರಾಯೋಗಿಕವಾಗಿಈ ವ್ಯವಸ್ಥೆ ಜಾರಿಗೆ ಬರಲಿದೆ’ ಎಂದು ಕೇಂದ್ರ ಹಣಕಾಸು ಸಚಿವ ಪೀಯೂಷ್ ಗೋಯಲ್ ಶನಿವಾರ ಜಿಎಸ್ಟಿ ಮಂಡಳಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಗ್ರಾಮೀಣ ಮತ್ತು ಅರೆಪಟ್ಟಣ ಪ್ರದೇಶಗಳಲ್ಲಿ ನಗದುರಹಿತ ವಹಿವಾಟಿಗೆ ಉತ್ತೇಜನ ನೀಡುವುದು ಇದರ ಉದ್ದೇಶವಾಗಿದೆ’ ಎಂದು ಹೇಳಿದ್ದಾರೆ.

ಈ ಸೌಲಭ್ಯದಿಂದ ಒಂದು ವರ್ಷಕ್ಕೆ ₹ 1 ಸಾವಿರ ಕೋಟಿ ವರಮಾನ ನಷ್ಟವಾಗುವ ಅಂದಾಜು ಮಾಡಲಾಗಿದೆ. ‘ಬಹುತೇಕ ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಿವೆ. ಆದರೆ, ಗ್ರಾಹಕರಿಗೆ ನೀಡುವ ಕ್ಯಾಷ್ಬ್ಯಾಕ್ ಮೊತ್ತದಲ್ಲಿ ಕೇಂದ್ರ ಮತ್ತು ರಾಜ್ಯದ ಪಾಲು ಎಷ್ಟು. ರಾಜ್ಯಗಳಿಗೆ ಆಗುವ ನಷ್ಟಕ್ಕೆ ಪರಿಹಾರವೇನು ಎನ್ನುವ ವಿಷಯಗಳ ಬಗ್ಗೆ ಮಂಡಳಿಯು ಅಂತಿಮ ನಿರ್ಧಾರ ಕೈಗೊಳ್ಳಬೇಕಾಗಿದೆ’ ಎಂದು ‘ಎಫ್ಕೆಸಿಸಿಐ’ನ ಜಿಎಸ್ಟಿ ಸಮಿತಿ ಅಧ್ಯಕ್ಷ ಬಿ.ಟಿ. ಮನೋಹರ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ 28 ಮತ್ತು 29 ರಂದು ಗೋವಾದಲ್ಲಿ ಮುಂದಿನ ಸಭೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.