ಅಹಮದಾಬಾದ್ (ಗುಜರಾತ್): ಶ್ರೀಲಂಕಾ ಮೂಲದ ನಾಲ್ವರು ಶಂಕಿತ ಐಸಿಸ್ ಉಗ್ರರನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದಾಗ, ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಆರೋಪಿಗಳನ್ನು ಬಂಧಿಸಿದೆ.

ಇವರು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನದ ಹ್ಯಾಂಡ್ಲರ್‌ಗಳಿಂದ ಸಂದೇಶಕ್ಕಾಗಿ ಕಾಯುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಅವರ ಫೋನ್‌ಗಳಲ್ಲಿರುವ ಕೆಲವು ಚಾಟ್‌ಗಳನ್ನು ಪೊಲೀಸರು ಪತ್ತೆ ಮಾಡಿದ್ದು, ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದ ಕೆಲವು ದಿನಗಳ ನಂತರ ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದೆ.

ಮೇ 12ರಂದು, ಅಹಮದಾಬಾದ್‌ನ ಸರ್ದಾರ್ ವಲಭ ಭಾಯ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ವಿಮಾನ ನಿಲ್ದಾಣ ಸಂಕೀರ್ಣದಲ್ಲಿ ಭದ್ರತಾ ಶೋಧ ನಡೆಸಿದ ಬಳಿಕ, ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿರಲಿಲ್ಲ. ಹೀಗಾಗಿ ಅದು ಹುಸಿ ಬೆದರಿಕೆ ಎನ್ನುವುದು ದೃಢಪಟ್ಟಿತ್ತು.

ಕಳೆದ ವರ್ಷ ಆಗಸ್ಟ್‌ನಲ್ಲಿ ಎಟಿಎಸ್, ಅಲ್ ಖೈದಾದೊಂದಿಗೆ ಸಂಪರ್ಕ ಹೊಂದಿದ್ದ ಮೂವರನ್ನು ರಾಜ್‌ಕೋಟ್‌ನಲ್ಲಿ ಬಂಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.