ಅಹಮದಾಬಾದ್ (ಪಿಟಿಐ): 2002ರ ಗೋಧ್ರೋತ್ತರ ಗಲಭೆಗೆ ಸಂಬಂಧಿಸಿ ಸಾಕ್ಷ್ಯಗಳನ್ನು ತಿರುಚಿದ ಆರೋಪದಡಿ ತಮ್ಮ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್ ಅನ್ನು ರದ್ದುಪಡಿಸಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಸಮೀರ್ ದಾವೆ ಅವರು ನಿರಾಕರಿಸಿದ್ದಾರೆ.

ಅಹಮದಾಬಾದ್ ಕ್ರೈಂ ಬ್ರ್ಯಾಂಚ್ ಪೊಲೀಸರು ತೀಸ್ತಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಿದ ವೇಳೆ ದಾವೆ ಅವರು, ‘ನಾನು ವಿಚಾರಣೆ ನಡೆಸುವುದಿಲ್ಲ. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಈ ಅರ್ಜಿ ವಿಚಾರಣೆಗೆ ಹೊಸ ನ್ಯಾಯಮೂರ್ತಿಯನ್ನು ನೇಮಕ ಮಾಡಲಿದ್ದಾರೆ’ ಎಂದು ಹೇಳಿದರು.

ಪ್ರಕರಣ ರದ್ದುಪಡಿಸುವಂತೆ ಕೋರಿ ತೀಸ್ತಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಕಳೆದ ತಿಂಗಳು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು.

ತೀಸ್ತಾ ಅವರ ಜಾಮೀನು ಅರ್ಜಿ ತಿರಸ್ಕರಿಸಿ ಗುಜರಾತ್ ಹೈಕೋರ್ಟ್ ತೀರ್ಪು ನೀಡಿತ್ತು. ಆದರೆ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಬಳಿಕ, ಪ್ರಕರಣ ರದ್ದುಪಡಿಸುಂತೆ ಕೋರಿ ಅವರು ಗುಜರಾತ್ ಹೈಕೋರ್ಟ್‌ಗೆ ಅವರು ಅರ್ಜಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.