ವಡೋದರ (ಗುಜರಾತ್): ಛತ್ರಪತಿ ಶಿವಾಜಿ ಮಹಾರಾಜ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ.

ಆರ್ಯನ್ ಪಟೇಲ್ ಬಂಧಿತ ಆರೋಪಿ. ಈತ ಗೆಳೆಯನೊಂದಿಗೆ ವಾದಿಸುತ್ತಿದ್ದ ವೇಳೆ ಶಿವಾಜಿ ಮಹಾರಾಜರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ. ಇದನ್ನು ವ್ಯಕ್ತಿಯೊಬ್ಬರು ಮೊಬೈಲ್‌ನಲ್ಲಿ ವಿಡಿಯೊ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

‘ಆರೋಪಿಯು ಕೆಟ್ಟ ಭಾಷೆಯನ್ನು ಬಳಸಿ ಶಿವಾಜಿ ಮಹಾರಾಜರ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾನೆ, ಇದರಿಂದ ಹಿಂದೂಗಳ ಭಾವನೆಗಳಿಗೆ ಘಾಸಿಯುಂಟಾಗಿದೆ’ ಎಂದು ದೂರುದಾರ ದೀಪಕ್ ಪಾಲ್ಕರ್ ಆರೋಪಿಸಿದ್ದಾರೆ. ವಾಟ್ಸ್‌ಆ್ಯಪ್‌ನಲ್ಲಿ ಬಂದಿದ್ದ ವಿಡಿಯೊವನ್ನು ನೋಡಿ ದೀಪಕ್ ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.