ಸೂರತ್: ನವರಾತ್ರಿ ಕಾರ್ಯಕ್ರಮಕ್ಕೆ ತೆರಳಿದ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಗುಜರಾತ್ನ ಸೂರತ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಮೊಟಾ ಬೊರ್ಸಾರಾ ಗ್ರಾಮದ ಹೊರವಲಯದಲ್ಲಿ ಈ ಕೃತ್ಯ ನಡೆದಿದೆ. ಗುಜರಾತ್ನ ವಡೋದರಾದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ ಸೂರತ್ ಜಿಲ್ಲೆಯಲ್ಲೂ ಇಂಥದ್ದೇ ಪ್ರಕರಣ ವರದಿಯಾಗಿದೆ.

‘ಟ್ಯೂಷನ್ ಮುಗಿಸಿದ ಬಾಲಕಿ ತನ್ನ ಸ್ನೇಹಿತೆಯರೊಂದಿಗೆ ನವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಳು. ರಾತ್ರಿ ಸುಮಾರು 10.30ರ ಹೊತ್ತಿಗೆ ಸ್ನೇಹಿತೆಯರೊಂದಿಗೆ ಮನೆಗೆ ಹೊರಡುತ್ತಿದ್ದ ಸಂದರ್ಭದಲ್ಲಿ ಮೂವರು ಪುರುಷರು ಆಕೆಯನ್ನು ಹಿಡಿದುಕೊಂಡರು. ನಂತರ ಅತ್ಯಾಚಾರವೆಸಗಿ, ಅವರ ಬಳಿ ಇದ್ದ ಮೊಬೈಲ್ ಫೋನ್ ಕಿತ್ತುಕೊಂಡು ಪರಾರಿಯಾಗಿದ್ದಾರೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

‘ಕೃತ್ಯ ಎಸಗಿದ ಮೂವರು ಶಂಕಿತರಲ್ಲಿ ಇಬ್ಬರನ್ನು ಗುರುತಿಸಲಾಗಿದೆ. ಇವರ ಪತ್ತೆಗೆ ಬಲೆ ಬೀಸಲಾಗಿದೆ. ಘಟನೆ ನಂತರ ಬಾಲಕಿ ಸ್ಥಳೀಯರ ನೆರವಿನೊಂದಿಗೆ ತನ್ನ ಮನೆಗೆ ವಿಷಯ ಮುಟ್ಟಿಸಿದ್ದಾಳೆ. ಅದೇ ಸಂದರ್ಭದಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

‘ಪ್ರಕರಣದ ತನಿಖೆಗೆ ಒಟ್ಟು ಹತ್ತು ತಂಡಗಳನ್ನು ರಚಿಸಲಾಗಿದೆ. ಶ್ವಾನ ದಳ, ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಕೂಡಾ ಘಟನಾ ಸ್ಥಳದಲ್ಲಿನ ಮಾಹಿತಿಯನ್ನು ಕಲೆ ಹಾಕಿವೆ. ಪೋಕ್ಸೊ ಹಾಗೂ ಇತರ ಸೆಕ್ಷನ್ಗಳಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಅ. 4ರಂದು ವಡೋದರಾದಲ್ಲೂ ಬಾಲಕಿ ಮೇಲೆ ಮೂವರು ಅತ್ಯಾಚಾರ ಎಸಗಿದ್ದ ಪ್ರಕರಣ ನಡೆದಿತ್ತು. ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.