ಇಂಫಾಲ್: ಮಣಿಪುರದ ಕಕ್ಚಿಂಗ್ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರಧಾರಿ ಬಂಡುಕೋರರ ಗುಂಪುಗಳ ನಡುವೆ ಶುಕ್ರವಾರ ಗುಂಡಿನ ಚಕಮಕಿ ನಡೆದಿದೆ ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತಿಳಿಸಿದ್ದಾರೆ.

‘ಒಂದೇ ಸಮುದಾಯಕ್ಕೆ ಸೇರಿದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ’ ಎಂದು ಬಿರೇನ್ ಅವರು ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

'ಬಿಷ್ಣುಪುರ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಯೋಧರಿಗಾಗಿ ನಿರ್ಮಿಸಲಾಗುತ್ತಿದ್ದ ಮನೆಯ ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕರ ಮೇಲೆ ಗುರುವಾರ ಶಸ್ತ್ರಾಸ್ತ್ರಧಾರಿಯೊಬ್ಬ ಗುಂಡು ಹಾರಿಸಿದ್ದಾನೆ. ಭದ್ರತಾ ಪಡೆಗಳು ಮರುದಾಳಿ ನಡೆಸಿದ್ದು, ಸುಮಾರು 30 ನಿಮಿಷ ಗುಂಡಿನ ಚಕಮಕಿ ನಡೆದಿದೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.