ಗುವಾಹಟಿ (ಅಸ್ಸಾಂ): ಅಸ್ಸಾಂನ ಗುವಾಹಟಿಯಲ್ಲಿ ಶನಿವಾರ ಸುಮಾರು 20 ಎಲ್ಪಿಜಿ ಸಿಲಿಂಡರ್ಗಳು ಸ್ಫೋಟಗೊಂಡ ಪರಿಣಾಮ ಸಂಭವಿಸಿದ ಅನಾಹುತದಲ್ಲಿ 66 ಗುಡಿಸಲುಗಳು ಬೆಂಕಿಗಾಹುತಿಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.

ನಗರದ ಜಲುಕ್ಬರಿಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಒಂದು ಗುಡಿಸಲಿನ್ಲಲಿ ಬೆಂಕಿ ಕಾಣಿಸಿಕೊಂಡ ನಂತರ ಅದು ಇತರೆ ಗುಡಿಸಲುಗಳಿಗೆ ಹರಡಿತ್ತು. ಮನೆಗಳಲ್ಲಿ ಇರಿಸಲಾಗಿದ್ದ ಎಲ್ಪಿಜಿ ಸಿಲಿಂಡರ್ಗಳು ಒಂದರ ಬಳಿಕ ಒಂದರಂತೆ ಸ್ಫೋಟಗೊಂಡಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಮಾದಕವಸ್ತು: ಪಾಕಿಸ್ತಾನದ 6 ಪ್ರಜೆಗಳ ವಿರುದ್ಧ ಎನ್ಐಎ ಆರೋಪಪಟ್ಟಿ

ಘಟನೆಯ ಹಿಂದಿನ ನಿಖರ ಕಾರಣಗಳು ತಿಳಿದು ಬಂದಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ತನಿಖೆಗೆ ಆದೇಶ ಹೊರಡಿಸಲಾಗಿದೆ.

14 ಅಗ್ನಿ ಶಾಮಕ ವಾಹನಗಳು ಸುಮಾರು ಮೂರು ಗಂಟೆಗಳಷ್ಟು ಕಾಲ ನಡೆಸಿದ ನಿರಂತರ ಪ್ರಯತ್ನದ ಬಳಿಕ ಬೆಂಕಿ ನಂದಿಸಲು ಯಶಸ್ವಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.