ವಾರಾಣಸಿ: ಜ್ಞಾನವಾಪಿ ಮಸೀದಿ ಆವರಣದಲ್ಲಿ ನಡೆಸಲಾಗಿರುವ ವೈಜ್ಞಾನಿಕ ಸಮೀಕ್ಷೆಯ ವರದಿ (ಎಎಸ್‌ಐ) ಸಲ್ಲಿಸಲು ಇನ್ನೂ ಮೂರು ವಾರಗಳ ಸಮಯಾವಕಾಶವನ್ನು ನೀಡಬೇಕು ಎಂದು ಕೋರಿ ಪುರಾತತ್ವ ಇಲಾಖೆಯು ಜಿಲ್ಲಾ ನ್ಯಾಯಾಲಯಕ್ಕೆ ಮಂಗಳವಾರ ಅರ್ಜಿ ಸಲ್ಲಿಸಿದೆ.

ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸಲಿದೆ.

ಹಲವು ತಜ್ಞರಿಂದ ಮತ್ತು ಹಲವು ಸಾಧನಗಳನ್ನು ಬಳಸಿ ಕಲೆಹಾಕಿರುವ ಮಾಹಿತಿಯನ್ನು ಸಮೀಕರಿಸಿ ವರದಿ ತಯಾರಿಸಲು ಹೆಚ್ಚು ಸಮಯ ಬೇಕಾಗುತ್ತದೆ ಎಂದು ಎಎಸ್‌ಐ ಅರ್ಜಿಯಲ್ಲಿ ತಿಳಿಸಿದೆ ಎಂದು ಹಿಂದೂ ಅರ್ಜಿದಾರರ ಪರ ವಕೀಲ ಮದನ್ ಮೋಹನ್ ಯಾದವ್ ಅವರು ಹೇಳಿದರು.

ಮೊದಲೇ ಇದ್ದ ಹಿಂದೂ ದೇವಾಲಯದ ರಚನೆಯ ಮೇಲೆ ಜ್ಞಾನವಾಪಿ ಮಸೀದಿಯನ್ನು ನಿರ್ಮಿಸಲಾಗಿದೆಯೇ ಎಂದು ತಿಳಿದುಕೊಳ್ಳುವ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.