ನವದೆಹಲಿ: ಸಂಸತ್ ಅಧಿವೇಶನವನ್ನು ಉದ್ದೇಶಿಸಿ ಶುಕ್ರವಾರ ರಾಷ್ಟ್ರಪತಿಯವರು ಮಾಡುವ ಭಾಷಣಕ್ಕೆ ಹಾಜರಾಗದಿರಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನಿರ್ಧರಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಬೆಳಿಗ್ಗೆ ಟ್ವೀಟ್ ಮಾಡಿರುವ ಅವರು, 'ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಬೆಂಬಲ ಸೂಚಿಸುವ ಸಲುವಾಗಿ ಸಂಸತ್ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾಡುವ ಭಾಷಣಕ್ಕೆ ಗೈರಾಗಲು ನಿರ್ಧರಿಸಿದ್ದೇನೆ. ಜೆಡಿಎಸ್ ಪಕ್ಷದೊಂದಿಗೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಂಡಿದ್ದೇನೆ' ಎಂದು ತಿಳಿಸಿದ್ದಾರೆ.

ಸಂಸತ್ತಿನ ಬಜೆಟ್ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಮಾಡಲಿರುವ ಭಾಷಣವನ್ನು ಬಹಿಷ್ಕರಿಸಲು ಕಾಂಗ್ರೆಸ್, ಎನ್‌ಸಿಪಿ, ಶಿವಸೇನಾ, ಟಿಎಂಸಿ, ಬಿಎಸ್‌ಪಿ ಸೇರಿ 16 ವಿರೋಧ ಪಕ್ಷಗಳು ನಿರ್ಧರಿಸಿವೆ. ಭಾಷಣವನ್ನು ಬಹಿಷ್ಕರಿಸುವುದಾಗಿ ಆಮ್ ಅದ್ಮಿ ಪಕ್ಷವು ಪ್ರತ್ಯೇಕ ಹೇಳಿಕೆಯಲ್ಲಿ ತಿಳಿಸಿದೆ.

ಕೇಂದ್ರದ ಆಡಳಿತಾರೂಢ ಮೈತ್ರಿಕೂಟ ಎನ್‌ಡಿಎಯ ಭಾಗವಾಗಿದ್ದ ಶಿರೋಮಣಿ ಅಕಾಲಿ ದಳ ಕೂಡ ಇಂತಹುದೇ ನಿರ್ಧಾರ ಕೈಗೊಂಡಿದೆ. ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲವಾಗಿ ಈ ಕ್ರಮ ಎಂದು ವಿರೋಧ ಪಕ್ಷಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.