ನವದೆಹಲಿ: ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕೋವಿಡ್ 19 ಮಾರ್ಗಸೂಚಿಗಳನ್ನು ಆಧರಿಸಿ ಹಾಗೂ ಸೌದಿ ಅರೇಬಿಯಾ ಸರ್ಕಾರದ ಅಂತಿಮ ಕರೆಯನ್ನು ಪರಿಗಣಿಸಿ ಮುಂದಿನ ವರ್ಷದ ಹಜ್ ಯಾತ್ರೆ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ತಿಳಿಸಿದ್ದಾರೆ.

ಸೋಮವಾರ ನಡೆದಹಜ್ ಸಮಿತಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ‘ಮುಂದಿನ ವರ್ಷ (2021) ಜೂನ್ – ಜುಲೈನಲ್ಲಿ ಹಜ್ ಯಾತ್ರೆ ನಿಗದಿಯಾಗಿದೆ. ಭಾರತೀಯ ಹಜ್ ಸಮಿತಿ ಮತ್ತು ಇತರೆ ಭಾರತೀಯ ಸಂಸ್ಥೆಗಳು ಸಾಂಪ್ರದಾಯಿಕವಾಗಿ ಹಜ್ ಯಾತ್ರೆಗೆ ಅರ್ಜಿ ಆಹ್ವಾನದಂತಹ ಪ್ರಕ್ರಿಯೆಗಳನ್ನು ನಡೆಸುತ್ತಿವೆ ಎಂದು ಹೇಳಿದರು.

ಕೊರೊನಾ ಸಾಂಕ್ರಾಮಿಕ ರೋಗ ಹಾಗೂ ಜನರ ಆರೋಗ್ಯ ಮತ್ತು ಯೋಗಕ್ಷೇಮದ ದೃಷ್ಟಿಯಿಂದ ಸೌದಿ ಅರೇಬಿಯಾ ಮತ್ತು ಭಾರತ ಸರ್ಕಾರ ಹೊರಡಿಸುವ ಮಾರ್ಗಸೂಚಿ ಅನ್ವಯ ‘ಹಜ್ 2021‘ ಯಾತ್ರೆಗೆ ಸಂಬಂಧಿಸಿದಂತೆ ಸೂಕ್ತ ಸಮಯದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ‘ ಎಂದು ನಖ್ವಿ ತಿಳಿಸಿದರು.

ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಆರೋಗ್ಯ ಮತ್ತು ಯೋಗಕ್ಷೇಮ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದ ಅವರು, ಈ ನಿಟ್ಟಿನಲ್ಲಿ ಭಾರತೀಯ ಸಂಸ್ಥೆಗಳು ಅಗತ್ಯ ವ್ಯವಸ್ಥೆಗಳನ್ನು ಖಚಿತಪಡಿಸಲಿದ್ದು, ಹಜ್ ಸಮಿತಿ ಕೂಡ ಈ ನಿಟ್ಟಿನಲ್ಲಿ ಸಿದ್ಧತೆಗಳನ್ನು ಪ್ರಾರಂಭಿಸಿದೆ ಎಂದು ಸಚಿವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.