ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ ಅವರ ತಾಯಿ ಸ್ನೇಹಲತಾ ಗೋಯೆಲ್ (89) ಅವರು ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

‘ನಮ್ಮ ತಾಯಿಯವರ ಅಪೇಕ್ಷೆಯಂತೆ, ಅವರ ಕಣ್ಣುಗಳನ್ನು ಅಖಿಲ ಭಾರತ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಹಾಗೂ ಅವರ ದೇಹವನ್ನು ಮೌಲಾನಾ ಅಝಾದ್ ವೈದ್ಯಕೀಯ ಕಾಲೇಜಿಗೆ ದಾನ ಮಾಡುವುದಾಗಿ‘ ಸಚಿವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ‘ತಮ್ಮ ತಾಯಿಯವರ ದೇಹದಾನದ ಕ್ರಮ ಸಮಾಜಕ್ಕೆ ಸ್ಪೂರ್ತಿಯಾಗಲಿ‘ ಎಂದು ಅವರು ತಿಳಿಸಿದ್ದಾರೆ.

‘ಈ ಭೂಮಿಯ ಮೇಲೆ ನಾನು ಅತ್ಯಂತ ಪ್ರೀತಿಸುತ್ತಿದ್ದ ವ್ಯಕ್ತಿ ನನ್ನ ತಾಯಿ. ಈಗ ಅವರು ನನ್ನನ್ನು ಬಿಟ್ಟು ಹೋಗಿದ್ದಾರೆ. ಅವರದು ಬಹಳ ಅತ್ಯುನ್ನತ ವ್ಯಕ್ತಿತ್ವ. ಅವರೊಬ್ಬ ತತ್ವಜ್ಞಾನಿ ಮತ್ತು ನನ್ನ ಮಾರ್ಗದರ್ಶಿಯಾಗಿದ್ದರು. ಅವರ ಅಗಲಿಕೆಯಿಂದ ನನಗೆ ತುಂಬಲಾರದ ನಷ್ಟವಾಗಿದೆ. ಆ ನಷ್ಟವನ್ನು ಯಾರೂ ತುಂಬಿಕೊಡಲಾರರು. ಅವರ ಆತ್ಮಕ್ಕೆ ಶಾಂತಿ ಸಿಗಲಿ‘ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.