ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹರಿಯಾಣ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ: 1,031 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Published : 5 ಅಕ್ಟೋಬರ್ 2024, 2:04 IST
Last Updated : 5 ಅಕ್ಟೋಬರ್ 2024, 2:04 IST
ಫಾಲೋ ಮಾಡಿ
Comments

ಚಂಡೀಗಢ: ಹರಿಯಾಣ ವಿಧಾನಸಭೆಯ ಎಲ್ಲಾ 90 ಕ್ಷೇತ್ರಗಳಿಗೆ ಮತದಾನ ಇಂದು (ಅ.5) ಬೆಳಿಗ್ಗೆ ಆರಂಭವಾಯಿತು. ರಾಜ್ಯದಾದ್ಯಂತ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ, ಕುಸ್ತಿಪಟು ವಿನೇಶ್ ಫೋಗಟ್, ಜೆಜೆಪಿಯ ನಾಯಕ ದುಷ್ಯಂತ್ ಚೌಟಾಲಾ ಸೇರಿದಂತೆ ಒಟ್ಟು 1,031 ಅಭ್ಯರ್ಥಿಗಳ ಭವಿಷ್ಯವನ್ನು 2 ಕೋಟಿಗೂ ಅಧಿಕ ಮತದಾರರು ನಿರ್ಣಯಿಸಲಿದ್ದಾರೆ.

ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು ಸಂಜೆ 5ರ ವರೆಗೆ ನಡೆಯಲಿದೆ. ಅಕ್ಟೋಬರ್‌ 8ರಂದು ಮತ ಎಣಿಕೆ ನಡೆಯಲಿದೆ.

ಸತತ ಮೂರನೇ ಬಾರಿಗೆ ಅಧಿಕಾರ ಪಡೆಯುವ ಉಮೇದಿನಲ್ಲಿ ಬಿಜೆಪಿ ಇದ್ದರೆ, 10 ವರ್ಷಗಳ ಬಳಿಕ ಸರ್ಕಾರ ರಚಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

ಒಟ್ಟು 2.04 ಕೋಟಿ ಮಂದಿ ಮತದಾರಾಗಿ ನೋಂದಾಯಿಸಿಕೊಂಡಿದ್ದು, ಇದರಲ್ಲಿ 8,821 ಶತಾಯುಷಿಗಳೂ ಸೇರಿದ್ದಾರೆ ಎಂದು ಹರಿಯಾಣದ ಮುಖ್ಯ ಚುನಾವಣಾ ಅಧಿಕಾರಿ ಪಂಕಜ್ ಅಗರ್‌ವಾಲ್ ಮಾಹಿತಿ ನೀಡಿದ್ದಾರೆ.

ಒಟ್ಟು 1,031 ಅಭ್ಯರ್ಥಿಗಳ ಪೈಕಿ 101 ಮಹಿಳೆಯರಿದ್ದು, 464 ಮಂದಿ ಸ್ವತಂತ್ರ್ಯವಾಗಿ ಸ್ಪರ್ಧಿಸುತ್ತಿದ್ದಾರೆ. 20,632 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT