ಚಂಡೀಗಢ: ಹರಿಯಾಣದ ನೂತನ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರ ಸಂಪುಟದ ಸಚಿವರಾಗಿ ಎಂಟು ಮಂದಿ ಶಾಸಕರು ಇಂದು ಪ್ರಮಾಣವಚನ ಸ್ವೀಕರಿಸಿದರು.

ರಾಭಜವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪ್ರಮಾಣ ವಚನ ಬೋಧಿಸಿದರು.

ಶಾಸಕರಾದ ಹಿಸಾರ್ ಕಮಾಲ್ ಗುಪ್ತಾ, ಸೀಮಾ ತ್ರಿಖಾ, ಮಹಿಪಾಲ್ ಧಂಡಾ, ಅಸೀಮ್ ಗೋಯೆಲ್, ಅಭೆ ಸಿಂಗ್ ಯಾದವ್, ಸುಭಾಷ್ ಸುಧಾ, ಬಿಶಂಬರ್ ಸಿಂಗ್ ಬಾಲ್ಮಿಕಿ ಮತ್ತು ಸಂಜಯ್ ಸಿಂಗ್ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಉಪಸ್ಥಿತರಿದ್ದರು.

ಕಳೆದ ವಾರ ನಯಾಬ್ ಸಿಂಗ್ ಸೈನಿ ಮುಖ್ಯಮಂತ್ರಿಯಾಗಿಯೂ, ಐವರು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈಗ ಮೊದಲ ಬಾರಿಗೆ ಸಂಪುಟ ವಿಸ್ತರಣೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.